ಬೆಂಗಳೂರು : ಕೋರಮಂಗಲದ ಪಿಜಿಯಲ್ಲಿ ಕೃತಿ ಕುಮಾರಿ ಹತ್ಯೆ ಪ್ರಕರಣ ಸಂಬಂಧ ಇದೀಗ ಆರೋಪಿ ಅಭಿಷೇಕ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನಲ್ಲಿ ಜು.23 ರಂದು ಕೋರಮಂಗಲದ ಪಿಜಿಯಲ್ಲಿ ಕೃತಿ ಕುಮಾರಿ ಕೊಲೆ ನಡೆದಿತ್ತು. ಕೊಲೆ ಬಳಿಕ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ಆರೋಪಿ ಅಭಿಷೇಕ್ ನನ್ನು ಬಂಧಿಸಿದಾರೆ.
ಜು.23 ರಂದು ರಾತ್ರಿ 11.13 ನಿಮಿಷಕ್ಕೆ ಆರೋಪಿ ಅಭಿಷೇಕ್ ಪಿಜಿಗೆ ಬಂದು ಕೃತಿ ಕುಮಾರಿ ಇದ್ದ ರೂಮ್ ಬಾಗಿಲು ಬಡಿದಿದ್ದಾನೆ. ಈ ವೇಳೆ ಡೋರ್ ಓಪನ್ ಮಾಡುತ್ತಿದ್ದಂತೆ ಚಾಕುವಿನಿಂದ ಇರಿಯಲು ಪ್ರಯತ್ನಿಸಿದ್ದಾನೆ. ಈ ವೇಳೆ ಕೃತಿ ಕುಮಾರಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ರೂ, ಬಿಡದೇ ಹಲವು ಬಾರಿ ಇರಿದು ಭೀಕರವಾಗಿ ಕೊಲೆ ಮಾಡಿದ್ದಾನೆ.