ಬೆಂಗಳೂರು : ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ನಟಿ ರನ್ಯ ರಾವ್ ಅವರನ್ನು ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಹೌದು ಕೆಂಪೇಗೌಡ ಅಂತರಾಷ್ಟ್ರೀಯ ಏರ್ಪೋರ್ಟ್ ನಲ್ಲಿ ರನ್ಯಾ ರಾವ್ ಅವರನ್ನು ವಶಕ್ಕೆ ಪಡೆಯಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಏರ್ಪೋರ್ಟ್ ನಲ್ಲಿ ವಿದೇಶದಿಂದ ಬಂದ ನಟಿ ರನ್ಯಾ ರಾವ್ ವಶಕ್ಕೆ ಪಡೆದ ಡಿ.ಆರ್.ಐ ತಂಡ. ಏರ್ಪೋರ್ಟ್ ಕಸ್ಟಮ್ಸ್ ಡಿ ಆರ್ ಐ ಅಧಿಕಾರಿಗಳಿಂದ ಸದ್ಯ ರನ್ಯಾ ರಾವ್ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ.ಕಳೆದ ರಾತ್ರಿ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಅಧಿಕಾರಿಗಳು ರನ್ಯಾ ಅವರನ್ನು ವಶಕ್ಕೆ ಪಡೆದಿದ್ದಾರೆ.
ಡಿಜಿಪಿ ರಾಮಚಂದ್ರ ರಾವ್ ಸಂಬಂಧಿಯಾಗಿರುವ ನಟಿ ರನ್ಯರಾವ್ ಖಚಿತ ಮಾಹಿತಿಯ ಮೇರೆಗೆ ಡಿ ಆರ್ ಐ ತಂಡ ಏರ್ಪೋರ್ಟ್ಗೆ ಬಂದಿತ್ತು. ನಟಿ ರನ್ಯಾ ಏರ್ಪೋರ್ಟಿಗೆ ಬರುತ್ತಿದ್ದಂತೆ ಅಧಿಕಾರಿಗಳು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕಳೆದ ರಾತ್ರಿ ದುಬೈನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಟಿ ರನ್ಯಾ ಆಗಮಿಸಿದ್ದರು ವಿದೇಶದಿಂದ ಹೆಚ್ಚುವರಿ ಗೋಲ್ಡ್ ತಂದ ಆರೋಪದಲ್ಲಿ ರನ್ಯ ರಾವ್ ಅವರನ್ನು ವಶಕ್ಕೆ ಪಡೆಯಲಾಗಿದೆ.