ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟಿಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ ಮೌಲ್ಯದಹಣ ಹಾಗೂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
BIGG NEWS: : ವಿಧಾನಸೌಧದಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಕೂಗಿದ್ದು ‘FSL’ ವರದಿಯಲ್ಲಿ ಧೃಡ- ಸಚಿವ ಜಿ.ಪರಮೇಶ್ವರ್!
ಐನೂರು ಮುಖಬೆಲೆಯ 51,95,500 ರೂಪಾಯಿ ವಶ ಪಡಿಸಿಕೊಂಡಿದ್ದು, ಕೌಲಾಲಂಪುರದಿಂದ ಚೆಕ್ ಇನ್ ಪ್ಯಾಕೇಜ್ ನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದರು ಎಂಬ ಮಾಹಿತಿ ಬಂದಿದೆ. ಅಲ್ಲದೆ ಜೊತೆಗೆ ದುಬೈನಿಂದ ಪೇಸ್ಟ್ ರೂಪದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಅಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದಾರೆ.
ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಮೂವರು ಅರೆಸ್ಟ್, ಸುದ್ದಿ ಖಚಿತ ಪಡಿಸಿದ ಗೃಹ ಸಚಿವ
ಐವತ್ತು ಲಕ್ಷ ಮೌಲ್ಯದ 24.824 ಗ್ರಾಂ ಚಿನ್ನವನ್ನು ಜಪ್ತಿ ಮಾಡಿಕೊಂಡಿದ್ದಾರೆ. ಇಂಡಿಗೋ ವಿಮಾನದಲ್ಲಿ ಬೆಂಗಳೂರಿಗೆ ಬಂದಿದ್ದಾಗ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಬೆಳಕಿಗೆ ಬಂದಿದೆ. ಬೆಂಗಳೂರಿನ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಘಟನೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ