ಬೆಂಗಳೂರು : ಕಾಂಕ್ರೀಟ್ ಮಿಕ್ಸರ್ ಲಾರಿ, 2 ಟ್ಯಾಕ್ಸಿ ಹಾಗೂ ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿ, ಕಾಂಕ್ರೀಟ್ ಮಿಕ್ಸರ್ ಲಾರಿ ಹರಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಹೌದು ಕಾಂಕ್ರೀಟ್ ಮಿಕ್ಸರ್ ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲಿ ಸಾವನ್ನಪ್ಪಿದ್ದು, ಶೆಟ್ಟಿಹಳ್ಳಿ ಬಳಿ ಸರಣಿ ಅಪಘಾತದಲ್ಲಿ ಬೈಕ್ ಸವಾರ ದುರ್ಮರಣ ಹೊಂದಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಶೆಟ್ಟಿಹಳ್ಳಿ ಗ್ರಾಮದಲ್ಲಿ ಸರಣಿ ಅಪಘಾತ ನಡೆದಿತ್ತು. ಕಾಂಕ್ರೀಟ್ ಮಿಕ್ಸರ್ ಲಾರಿ 2 ಟ್ಯಾಕ್ಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿತ್ತು. ಅಪಘಾತದ ಸ್ಥಳಕ್ಕೆ ಸಚಿವ ಕೃಷ್ಣ ಭೈರೇಗೌಡ ಭೇಟಿ ನೀಡಲಿದ್ದಾರೆ.