ಬೆಂಗಳೂರು : ಇತ್ತೀಚಿಗೆ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ತನಿಖೆಯಲ್ಲಿ ಇರುವಾಗಲೇ ಬೆಂಗಳೂರಿನಲ್ಲಿ ಮತ್ತೊರ್ವ ಬಿಜೆಪಿ ಕಾರ್ಯಕರ್ತ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನಲ್ಲಿ ನಡೆದಿದೆ.
ಫೇಸ್ಬುಕ್ ನಲ್ಲಿ ವಿಡಿಯೋ ಮಾಡಿ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಮರಕ್ಕೆ ನೇಣು ಬಿಗಿದುಕೊಂಡು ಪ್ರವೀಣ್ ಗೌಡ ಬೇಲೂರು (35) ಆತ್ಮಹತ್ಯೆಗೆ ಶರಣಾಗಿದ್ದಾರೆ. ಆನೇಕಲ್ ಪಟ್ಟಣದ ಎಸ್ವಿಎಂ ಸ್ಕೂಲ್ ಬಳಿ ಈ ಒಂದು ಘಟನೆ ನಡೆದಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ಪಟ್ಟಣದ ಎಸ್ವಿಎಂ ಸ್ಕೂಲ್ ಬಳಿ ಸಾವಿಗೆ ಕಾರಣರಾದವರ ಹೆಸರುಗಳನ್ನು ವಿಡಿಯೋದಲ್ಲಿ ರೆಕಾರ್ಡ್ ಮಾಡಿ ಪ್ರವೀಣ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ವಿಡಿಯೋದಲ್ಲಿ ಏನಿದೆ?
ಕಳೆದ ಎರಡು ತಿಂಗಳಿನಿಂದ ಮಾನಸಿಕವಾಗಿ ನೊಂದಿದ್ದೇನೆ. ನನ್ನ ಸಾವಿಗೆ ಕೆಲವರು ನೇರವಾಗಿ ಕಾರಣರಾಗಿದ್ದಾರೆ. ಸಮಂದೂರ್ ಕಿರಣ್, ಗೋಕುಲ್ ಪ್ಯಾಶನ್ ಹರೀಶ್, ಭಾಸ್ಕರ್, ನಾರಾಯಣಪ್ಪ ದೊಡ್ಡಹಾಗಡೆ, ಮಧುಗೌಡ,ಳ್ ಹಾಗು ಸರವಣ ಎಂಬುವವರ ಹೆಸರು ವಿಡಿಯೋದಲ್ಲಿ ಉಲ್ಲೇಖಿಸಿದ್ದು ಯಾರನ್ನು ಬಿಟ್ಟರು ಕಿರಣ್ನನ್ನು ದಯವಿಟ್ಟು ಬಿಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಕಿರಣ್ ಹಲವು ಹೆಣ್ಣು ಮಕ್ಕಳಿಗೆ ಫೋನ್ ಮಾಡಿ ಕಿರುಕುಳ ಕೊಡುತ್ತಿದ್ದಾನೆ. ಕಿರಣ್ ಮಾಡಿರುವ ಇಂತಹ ಕೆಲಸಗಳೆಲ್ಲ ನನ್ನ ಮೇಲೆ ಬಂದಿವೆ. ಹಣದ ವಿಚಾರವಾಗಿ ಮಾತುಕತೆಗೆ ಎಂದು ಕರೆಸಿಕೊಂಡು ಹಲ್ಲೆ ನಡೆಸಿದ್ದಾರೆ. ನನ್ನನ್ನು ಬಿಜೆಪಿ ಮುಖಂಡ ನಾಯನಹಳ್ಳಿ ಮುನಿರಾಜು ಮನೆಗೆ ಕರೆದಿದ್ದರು. ಈ ವೇಳೆ ಆನೇಕಲ್ ಕೌನ್ಸಿಲರ್ ಭಾಗ್ಯ ಮತ್ತು ಆಕೆಯ ಪ್ರತಿ ಶ್ರೀನಿವಾಸ್ ಏಕಾಏಕಿ ಹತ್ತಾರು ಮಂದಿಯನ್ನು ಕರೆಸಿಕೊಂಡಿದ್ದಾರೆ.
ಈ ವೇಳೆ ಮೊಬೈಲ್ ಕಿತ್ತುಕೊಂಡು ಎರಡು ಗಂಟೆಗಳ ಕಾಲ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ. ಮನಸೋ ಇಚ್ಛೆ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಎಂದು ಪ್ರವೀಣ್ ಬೇಲೂರು ವಿಡಿಯೋದಲ್ಲಿ ಆರೋಪಿಸಿದ್ದಾರೆ. ನಾನು ಸತ್ತ ಮೇಲೆ ನನ್ನ ದೇಹದ ಮೇಲಿರುವ ಗಾಯದ ಗುರುತನ್ನು ಪರಿಶೀಲಿಸಿ, ಪೊಲೀಸರು ನ್ಯಾಯ ಕೊಡಿಸಬೇಕು ಎಂದು ಮನವಿ ಮಾಡಿದ್ದಾರೆ. ಸಾವಿಗೂ ಮುನ್ನ ವಿಡಿಯೋ ಮಾಡಿ ಫೇಸ್ ಬುಕ್ ನಲ್ಲಿ ಪ್ರವೀಣ್ ಬೇಲೂರು ಪೋಸ್ಟ್ ಮಾಡಿದ್ದಾರೆ. ಬಳಿಕ ನಿನ್ನೆ ರಾತ್ರಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನಾ ಸ್ಥಳಕ್ಕೆ ಆನೇಕಲ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.