ಬೆಂಗಳೂರು : ಬೆಂಗಳೂರಿನಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ರಸ್ತೆ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದೇವನಹಳ್ಳಿ ಬಳಿ ಕಂಬಳಿಪುರದಲ್ಲಿ ನಡೆದಿದೆ.
ರಸ್ತೆಯ ಬದಿಯಲ್ಲಿ ನಿಂತಿದ್ದ ಟ್ರಕ್ ಗೆ ವೇಗವಾಗಿ ಬಂದಂತಹ ಕಾರು ಭೀಕರವಾಗಿ ಡಿಕ್ಕಿ ಹೊಡೆದಿದೆ.ಈ ವೇಳೆ ನಿಯಂತ್ರಣ ತಪ್ಪಿ ಟ್ರಕ್ಕಿಗೆ ಕಾರು ಡಿಕ್ಕಿ ಹೊಡೆದಿದೆ ಕೂಡಲೇ ಕಾರು ಚಾಲಕ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರವಾದ ಗಾಯಗಳಾಗಿವೆ. ಮೃತನನ್ನು ಆಂಧ್ರ ಮೂಲದ ಅಮರ್ ಪ್ರಸಾದ್ ಮೃತ ಚಾಲಕ ಎಂದು ತಿಳಿದುಬಂದಿದ್ದು ಅಪಘಾತದ ರಭಸಕ್ಕೆ ಕಾರು ಮೂರು ರೌಂಡ್ ಪಲ್ಟಿ ಹೊಡೆದಿದೆ.