ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಘೋರ ದುರಂತ ಸಂಭವಿಸಿದ್ದು, ಇಬ್ಬರು ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಬೆಂಗಳೂರಿನ ಸದಾಶಿವನಗರ ಠಾಣಾ ವ್ಯಾಪ್ತಿಯಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿ ಅನೂಪ್ ಕುಮಾರ್, ಪತ್ನಿ ರಾಖಿ ಇಬ್ಬರು ಮಕ್ಕಳನ್ನು ಕೊಂದು ಬಳಿಕ ತಾವೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.