ಶಿವಮೊಗ್ಗ : ದಾವಣಗೆರೆ ಪೊಲೀಸರಿಂದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪಗೆ ನೋಟಿಸ್ ಜಾರಿ ಮಾಡಿದ್ದೂ, ಶಿವಮೊಗ್ಗದ ಈಶ್ವರಪ್ಪ ನಿವಾಸಕ್ಕೆ ಪೊಲೀಸರು ಆಗಮಿಸಿ ನೋಟಿಸ್ ಜಾರಿ ಮಾಡಿದ್ದಾರೆ.ಶಿವಮೊಗ್ಗದ ಮಲ್ಲೇಶ್ವರ ಬಡಾವಣೆಯಲ್ಲಿ ಮಾಜಿ ಸಚಿವ ಕೆಎಸ್ ಈಶ್ವರಪ್ಪ ನಿವಾಸಕ್ಕೆ ಪೊಲೀಸರು ಭೇಟಿ ನೀಡಿ ನೋಟಿಸ್ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
ರಾಷ್ಟ್ರದ್ರೋಹಿಗಳನ್ನ ಗುಂಡಿಕ್ಕಿ ಕೊಲ್ಲುವ ಕಾನೂನು ತರಬೇಕು ಅಂತ ವಿವಾದಾತ್ಮಕ ಹೇಳಿಕೆಯನ್ನು ಮಾಜಿ ಸಚಿವ ಕೆಎಸ್ ಈಶ್ವರಪ್ಪ ಹೇಳಿಕೆ ನೀಡಿದ್ದರು. ಅವರ ಹೇಳಿಕೆಯನ್ನು ಖಂಡಿಸಿ ದಾವಣಗೆರೆಯಲ್ಲಿ ಕೇಸ್ ದಾಖಲಾಗಿತ್ತು.
ದೇಶದ ವಿಭಜನೆ ವಿಚಾರವಾಗ ಕಾಂಗ್ರೆಸ್ ನಾಯಕರ ವಿರುದ್ಧ ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ನಾಯಕರು ಕಿಡಿಕಾರುತ್ತಿದ್ದಾರೆ. ಇದೇ ಸಮಯದಲ್ಲಿ ಅಂದರೆ ನಿನ್ನೆ ಕೆಎಸ್ ಈಶ್ವರಪ್ಪ, ಡಿಕೆ ಸುರೇಶ್ ಹಾಗೂ ವಿನಯ್ ಕುಲಕರ್ಣಿ ವಿರುದ್ಧ ಗುಡುಗಿದ್ದರು. ದೇಶದ್ರೋಹಿಗಳನ್ನ ಗುಂಡಿಕ್ಕಿ ಕೊಲ್ಲುವ ಕಾನೂನು ತನ್ನಿ ಎಂದು ಪ್ರಧಾನಿ ಮೋದಿಗೆ ಆಗ್ರಹಿಸಿದ್ದರು. ಸದ್ಯ ಇದೇ ವಿಚಾರವಾಗಿ ಕೆಎಸ್ ಈಶ್ವರಪ್ಪ ವಿರುದ್ಧ ಎಫ್ಐಆರ್ ದಾಖಲಾಗಿತ್ತು.
ದಾವಣಗೆರೆ ನಗರದ ನಿಜಲಿಂಗಪ್ಪ ಬಡಾವಣೆ ನಿವಾಸಿ ಕಾಂಗ್ರೆಸ್ ಮುಖಂಡ ಹನುಮಂತಪ್ಪ ಎಂಬುವವರು ನೀಡಿದ ದೂರು ಆಧರಿಸಿ ಐಪಿಸಿ ಸೆಕ್ಷನ್ 505(1)ಸಿ, 505(2), 506ರ ಅಡಿ ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಇದೀಗ ದಾವಣಗೆರೆ ಪೊಲೀಸ್ರು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ನಿವಾಸಕ್ಕೆ ಆಗಮಿಸಿ, ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಈಶ್ವರಪ್ಪ ಹೇಳಿದ್ದೇನು?
ದೇಶದ ವಿಭಜನೆ ವಿಚಾರವಾಗ ಕಾಂಗ್ರೆಸ್ ನಾಯಕರ ವಿರುದ್ಧ ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ನಾಯಕರು ಕಿಡಿಕಾರುತ್ತಿದ್ದಾರೆ. ಇದೇ ಸಮಯದಲ್ಲಿ ಅಂದರೆ ನಿನ್ನೆ ಕೆಎಸ್ ಈಶ್ವರಪ್ಪ, ಡಿಕೆ ಸುರೇಶ್ ಹಾಗೂ ವಿನಯ್ ಕುಲಕರ್ಣಿ ವಿರುದ್ಧ ಗುಡುಗಿದ್ದರು. ದೇಶದ್ರೋಹಿಗಳನ್ನ ಗುಂಡಿಕ್ಕಿ ಕೊಲ್ಲುವ ಕಾನೂನು ತನ್ನಿ ಎಂದು ಪ್ರಧಾನಿ ಮೋದಿಗೆ ಆಗ್ರಹಿಸಿದ್ದರು. ಸದ್ಯ ಇದೇ ವಿಚಾರವಾಗಿ ಕೆಎಸ್ ಈಶ್ವರಪ್ಪ ವಿರುದ್ಧ ಎಫ್ಐಆರ್ ದಾಖಲಾಗಿತ್ತು.
ಸಂಸದ ಡಿ.ಕೆ.ಸುರೇಶ್ ಮತ್ತು ವಿನಯ್ ಕುಲಕರ್ಣಿಗೆ ಗುಂಡಿಕ್ಕಿ ಕೊಲ್ಲಬೇಕೆಂದು ಹೇಳಿಕೆ ನೀಡಿದ್ದ ಬಿಜೆಪಿಯ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ವಿರುದ್ಧ ಎಫ್ಐಆರ್ ದಾಖಲಾಗಿದೆ. ದಾವಣಗೆರೆ ನಗರದ ನಿಜಲಿಂಗಪ್ಪ ಬಡಾವಣೆ ನಿವಾಸಿ ಕಾಂಗ್ರೆಸ್ ಮುಖಂಡ ಹನುಮಂತಪ್ಪ ಎಂಬುವವರು ನೀಡಿದ ದೂರು ಆಧರಿಸಿ ಐಪಿಸಿ ಸೆಕ್ಷನ್ 505(1)ಸಿ, 505(2), 506ರ ಅಡಿ ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಸಂಸದ ಡಿಕೆ ಸುರೇಶ್ ಹಾಗೂ ಶಾಸಕ ವಿನಯ್ ಕುಲಕರ್ಣಿ ರೀತಿ ದೇಶದ್ರೋಹಿ ಹೇಳಿಕೆ ನೀಡಿದವರಿಗೆ ಗುಂಡಿಕ್ಕುವ ಕಾನೂನು ತನ್ನಿ ಎಂದು ಪ್ರಧಾನಿ ನರೇಂದ್ರ ಮೋದಿಗೆ ಕೆಎಸ್ ಈಶ್ವರಪ್ಪ ಆಗ್ರಹಿಸಿದ್ದರು. ಸದ್ಯ ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗುತ್ತಿದೆ.