ಬೆಂಗಳೂರು : ಬೆಂಗಳೂರಿನಲ್ಲಿ ಸ್ಪಾ ಒಂದರಲ್ಲಿ ಕೆಲಸ ಮಾಡುತ್ತಿದ್ದ ದೆಹಲಿ ಮೂಲದ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಬಾಗಲಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹೌದು ಬೆಂಗಳೂರಲ್ಲಿ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸ್ಪಾದಲ್ಲಿ ಸೋನಿಯಾ (24) ಕೆಲಸ ಮಾಡುತ್ತಿದ್ದಳು. ಬೆಂಗಳೂರಿನ ಬಾಗಲಕುಂಟೆಯಲ್ಲಿ ಒಂದು ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿ ಸೋನಿಯಾ ಮೂಲತಃ ದೆಹಲಿಯವಳು ಎಂದು ತಿಳಿದುಬಂದಿದೆ.ಸೋನಿಯಾ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸದ್ಯ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಆದರೆ ಆತ್ಮಹತ್ಯೆಗೆ ಏನು ಕಾರಣ ಎನ್ನುವುದು ಕುರಿತಂತೆ ತನಿಖೆ ವೇಳೆ ತಿಳಿದುಬರಲಿದೆ.