ಬೆಂಗಳೂರು : ಬೆಂಗಳೂರಿನಲ್ಲಿ ಶಾಲಾ ಕಾಲೇಜು ಬಳಿ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಓರ್ವ ಡ್ರಗ್ ಪೆಡ್ಲರ್ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಯುವಕನನ್ನು ಸಂಜಯ್ (21) ಎಂದು ತಿಳಿದುಬಂದಿದೆ. ದಾಸರಹಳ್ಳಿಯ ಕೆಂಪೇಗೌಡ ಉದ್ಯಾನವನದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.
ಬಂಧಿತನ ಬಳಿ ಇದ್ದ 2ಕೆಜಿಗೂ ಅಧಿಕ ಗಾಂಜಾ ಜಪ್ತಿ ಮಡಲಾಗಿದೆ. ಆರೋಪಿ ಚಿಕ್ಕ ಕವರ್ ನಲ್ಲಿ ಪ್ಯಾಕ್ ಮಾಡಿ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ. ಕೆಂಪೇಗೌಡ ಉದ್ಯಾನವನದಲ್ಲಿ ಮಾರಾಟ ಮಾಡುತ್ತಿದ್ದಾಗಲೇ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.