ಬೆಂಗಳೂರು : ಬೆಂಗಳೂರಿನಲ್ಲಿ ಫೇಲ್ ಆಗಿದ್ದಕ್ಕೆ ಹೆದರಿ ಎಂಜಿನಿಯರಿಂಗ್ ವಿದ್ಯಾರ್ಥಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ಎರಡು ವಿಷಯಗಳಲ್ಲಿ ಫೇಲ್ ಆಗಿದ್ದಕ್ಕೆ ಹೆದರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಬಿಹಾರ ಮೂಲದ ಅಮೃತೇಶ್ ಪಾಂಡೆ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯಾಗಿದ್ದು, ಹೇಮಲತಾ ಪಾಂಡೆ, ವಿಜಯಶಂಕರ್ ದಂಪತಿಯ ಮಗ ಅಮೃತೇಶ್ ಪಾಂಡೆ ಆರ್. ವಿ.ಕಾಲೇಜಿನಲ್ಲಿ ಎಂಜಿನಿಯರಿಂಗ್ ಓದುತ್ತಿದ್ದ. ಆದರೆ ಎರಡು ವಿಷಯದಲ್ಲಿ ಫೇಲ್ ಆಗಿದ್ದು, ತಂದೆಗೆ ತಿಳಿಯುತ್ತದೆ ಎಂದು ಹೆದರಿ ಜಿಗಣಿ ಕೆರೆಗೆ ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜಿಗಣಿ ಕೆರೆಯಲ್ಲಿ ಶವ ಪತ್ತೆಯಾಗಿದ್ದು, ಸ್ಥಳೀಯರು ಜಿಗಣಿ ಠಾಣೆಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.