ಬೆಂಗಳೂರು : ಆರ್ಥಿಕ ಸಹಾಯ ಮಾಡುವುದಾಗಿ ಕರೆದೊಯ್ದು ಬಲವಂತವಾಗಿ ಮದ್ಯ ಕುಡಿಸಿ 26 ವರ್ಷದ ಯುವತಿಯ ಮೇಲೆ ಅತ್ಯಾಚಾರ ನಡೆಸಿರುವ ಆರೋಪದ ಹಿನ್ನೆಲೆಯಲ್ಲಿ ಇದೀಗ ಬಿಜೆಪಿ ಮುಖಂಡ ಸೋಮಶೇಖರ್ ಜಯರಾಜ್ ವಿರುದ್ಧ ಸಂತ್ರಸ್ತ ಯುವತಿ ಬೆಂಗಳೂರಿನ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ.ಈ ಸಂಬಂಧಪಟ್ಟ ಪೊಲೀಸರು ಬಿಜೆಪಿ ಮುಖಂಡನ ವಿರುದ್ಧ FIR ದಾಖಸಿಕೊಂಡಿದ್ದಾರೆ.
ದೂರುದಾರ ಯುವತಿಗೆ ಆಕೆಯ ಸ್ನೇಹಿತ ಇಂದ ಸೋಮಶೇಖರ್ ಪರಿಚಯವಾಗಿತ್ತು ಕಳೆದ ವರ್ಷ ಯುವತಿಯ ಮದುವೆ ಹಿನ್ನೆಲೆಯಲ್ಲಿ ಸೋಮಶೇಖರ್ ಬಳಿ ಹಣದ ಸಹಾಯ ಕೇಳಿದ್ದಳು. ಹಾಗಾಗಿ ಸೋಮಶೇಖರ್ ಮಹಿಳೆ ಇರುವ ಪೀಜಿಗೆ ತೆರಳಿ, ಅಲ್ಲಿಂದ ಆಕೆಯನ್ನು ತನ್ನ ಫ್ಲಾಟ್ ಗೆ ಕರೆದುಕೊಂಡು ಹೋಗಿ ಬಲವಂತವಾಗಿ ಮದ್ಯ ಕುಡಿಸಿ ಅತ್ಯಾಚಾರ ಎಸಗಿದ್ದಾನೆ.
ಅತ್ಯಾಚಾರ ಎಸಗಿದ ಬಳಿಕ ಯಾರಿಗಾದರೂ ಹೇಳಿದರೆ ಕೊಲೆ ಮಾಡುವ ಬೆದರಿಕೆ ಕೂಡ ಹಾಕಿದ್ದ ಎಂದು ಸಂತ್ರಸ್ತ ಯುವತಿ ದೂರಿನಲ್ಲಿ ತಿಳಿಸಿದ್ದಾರೆ. ಇದೀಗ ಯುವತಿಯ ದೂರಿನ ಅನ್ವಯ ಬಿಜೆಪಿ ಮುಖಂಡ ಸೋಮಶೇಖರ್ ಜಯರಾಜ್ ವಿರುದ್ಧ ಬೆಂಗಳೂರಿನ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದ್ದು, ಪ್ರಕರಣ ದಾಖಲಾಗುತ್ತಿದ್ದಂತೆ ಸೋಮಶೇಖರ್ ತಲೆಮರೆಸಿಕೊಂಡಿದ್ದಾರೆ. ಆತನ ಶೋಧ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.