ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ನಮ್ಮ ಮೆಟ್ರೋ ರೈಲಿನಲ್ಲಿ ಹಲವು ಅವಾಂತರಗಳು ನಡೆಯುತ್ತಿದ್ದು, ಮೆಟ್ರೋ ಅಧಿಕಾರಿಗಳು ಎಷ್ಟೇ ಕಠಿಣ ಕ್ರಮ ಕೈಗೊಂಡರು ಸಹ ಪ್ರಕರಣಗಳು ನಡೆಯುತ್ತಲೇ ಇವೆ. ಇದೀಗ ಬೇಲಿಯೇ ಎದ್ದು ಹೊಲ ಮೆಯ್ದಂತೆ ಮೆಟ್ರೋ ಅಧಿಕಾರಿಯಿಂದಲೇ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ.
ಶಿವಮೊಗ್ಗ : ತಂಗಿಯನ್ನು ಪ್ರೀತಿಸಿದ ಯುವಕನನ್ನು ‘ಕಾರಿನಲ್ಲಿ’ ಜೀವಂತವಾಗಿ ‘ಸುಟ್ಟು’ ಹಾಕಿದ ಕಿರಾತಕರು
ಹೌದು ಇತ್ತೀಚಿಗೆ ಮಹಿಳಾ ಪ್ರಯಾಣಿಕರ ಜೊತೆ ಅನುಚಿತ ವರ್ತನೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಬಗ್ಗೆ ನಿರಂತರವಾಗಿ ವರದಿಗಳು ಬರುತ್ತಿವೆ. ಆದರೆ, ಇದೀಗ ಅಧಿಕಾರಿಯೊಬ್ಬರು ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ಸುಬ್ರಮ್ಮಣ್ಯ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಉದ್ಯೋಗ ವಾರ್ತೆ: KPSCಯಿಂದ ಗ್ರಾಮೀಣ ನೀರು ಮತ್ತು ನೈರ್ಮಲ್ಯ ಇಲಾಖೆಯ 71 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ರಾಜಾಜಿನಗರದ ಮೆಟ್ರೋ ನಿಲ್ದಾಣದಲ್ಲಿ ಅಧಿಕಾರಿ ಗಜೇಂದ್ರ ಎಂಬುವವರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದ್ದು, ಈ ಸಂಬಂಧ FIR ದಾಖಲಾಗಿದೆ ಎನ್ನಲಾಗುತ್ತಿದೆ.ಅಧಿಕಾರಿ ಗಜೇಂದ್ರ ಮಹಿಳಾ ಸಿಬ್ಬಂದಿಗಳಿಗೆ ಅಶ್ಲೀಲ ಪದಗಳಿಂದ ನಿಂದಿಸುವುದಲ್ಲದೆ ಮೈಕೈ ಮುಟ್ಟಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಉದ್ಯೋಗ ವಾರ್ತೆ: KPSCಯಿಂದ ಗ್ರಾಮೀಣ ನೀರು ಮತ್ತು ನೈರ್ಮಲ್ಯ ಇಲಾಖೆಯ 71 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಅಲ್ಲದೆ ತನಗೇ ಸಹಕರಿಸದ ಸಿಬ್ಬಂದಿಯನ್ನು ಬೇರೆಡೆ ವರ್ಗಾವಣೆ ಮಾಡುವುದಾಗಿ ಬೆದರಿಸಿದ್ದಾನೆ. ಸೆಕ್ಯೂರಿಟಿ ಏಜೆನ್ಸಿ ಮಾಲೀಕನಿಂದಲೂ ಸಹಕರಿಸುವಂತೆ ಒತ್ತಾಯ ಮಾಡಿದ ಆರೋಪ ಕೇಳಿ ಬಂದಿದೆ. ಸಹಕರಿಸಿ ಇಲ್ಲ ಕೆಲಸದಿಂದ ತೆಗೆಯುತ್ತೇನೆ ಅಂತಾರೆ ಎಂದು ಮಹಿಳಾ ಸಿಬ್ಬಂದಿ ಪೊಲೀಸರು ಹಾಗೂ ಬಿಎಂಆರ್‌ಸಿಎಲ್ ಅಧಿಕಾರಿಗಳಿಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಲಾಗಿದೆ.