ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನ ಮಾರತಹಳ್ಳಿಯಲ್ಲಿ ಪತ್ನಿಯ ಕಾಟಕ್ಕೆ ಮನನೊಂದು ಸುಮಾರು 40 ಪುಟಗಳಷ್ಟು ಡೆತ್ ನೋಟ್ ಬರೆದಿಟ್ಟು ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಆತನ ಪತ್ನಿ ಸೇರಿದಂತೆ ನಾಲ್ವರ ವಿರುದ್ಧ FIR ದಾಖಲಾಗಿದೆ.
ಹೌದು ಸಹೋದರ ಬಿಕಾಸ್ ಕುಮಾರ್ ನೀಡಿದ ದೂರಿನಡಿ ಅತುಲ್ ಮಡದಿ ನಿಕಿತಾ ಸಿಂಘಾನಿಯ, ನಿಶಾ ಸಿಂಘಾನಿಯಾ, ಅನುರಾಗ್ ಸಿಂಘಾನಿಯಾ ಹಾಗೂ ಸುಶೀಲ್ ಸಿಂಘಾನಿಯಾ ವಿರುದ್ಧ ಮಾರತಹಳ್ಳಿಯಲ್ಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅತುಲ್ ಸುಭಾಷ್ ಮತ್ತು ನಿಕಿತಾ ಸಿಂಘಾನಿಯ 2019ರಲ್ಲಿ ಮದುವೆಯಾಗಿದ್ದು ಗಂಡು ಮಗು ಇದೆ. ನಿಕಿತಾ ಸಿಂಘಾನಿಯಾ, ತಾಯಿ ನಿಶಾ ಸಿಂಘಾನಿಯಾ, ಸಹೋದರ ಅನುರಾಗ್ ಸಿಂಘಾನಿಯಾ ಸಂಬಂಧಿ ಸುಶೀಲ್ ಸಿಂಘಾನಿಯಾ ಸೇರಿ ಅತುಲ್ ಮೇಲೆ ಸುಳ್ಳು ಕೇಸ್ ಹಾಕಿದ್ದಾರೆ. ಪ್ರಕರಣದ ಇತ್ಯರ್ಥಕ್ಕಾಗಿ 3 ಕೋಟಿ ರೂ.ನೀಡಬೇಕೆಂದು ಒತ್ತಾಯ ಮಾಡಿದ್ದರು.
ಅಷ್ಟೇ ಅಲ್ಲದೇ ಮಗನ ಭೇಟಿಗೆ ಅವಕಾಶ ನೀಡಲು 30 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು.
3 ಕೋಟಿ ಹಣ ನೀಡದಿದ್ದರೆ ನೀನು ಬದುಕಬೇಡ. ಆತ್ಮಹತ್ಯೆ ಮಾಡಿಕೋ ಎಂದು ಅಣಕಿಸುತ್ತಿದ್ದರು. ಇದರಿಂದ ಮಾನಸಿಕವಾಗಿ ಮತ್ತು ದೈಹಿಕವಾಗಿ ನೊಂದು ನನ್ನ ಅಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಬಿಕಾಸ್ ಕುಮಾರ್ ದೂರು ನೀಡಿದ್ದಾರೆ. ಇದೀಗ ಎಫ್ಐಆರ್ ದಾಖಲಾದ ಹಿನ್ನೆಲೆಯಲ್ಲಿ ಆರೋಪಿಗಳನ್ನು ಪೋಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.