ಬೆಂಗಳೂರು : ಬೆಂಗಳೂರಿನಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಮನೆಗಳ್ಳತನ ಮಾಡುತ್ತಿದ್ದ ನೇಪಾಳಿ ಗ್ಯಾಂಗ್ ಒಂದನ್ನು ಬೆಂಗಳೂರಿನ ತಲಘಟ್ಟಪುರ ಪೊಲೀಸರು ಇದೀಗ ಅರೆಸ್ಟ್ ಮಾಡಿದ್ದಾರೆ.
ಬಂಧಿತ ಆರೋಪಿಗಳನ್ನು ಲಾಲ್, ಕಮಲ್, ಕಿರಣ್, ನೇತ್ರ ಹಾಗು ಬಹದ್ದೂರ್ ಮತ್ತು ರಾಜೇಶ್ ಎನ್ನುವ ಆರೋಪಿಗಳನ್ನು ಬಂಧಿಸಿದ್ದಾರೆ. ಐವರು ಆರೋಪಿಗಳನ್ನ ಬೆಂಗಳೂರಿನ ತಲಘಟ್ಟಪುರ ಪೊಲೀಸರು ಇದೀಗ ಅರೆಸ್ಟ್ ಮಾಡಿದ್ದಾರೆ.
ಬೀಗ ಹಾಕಿದ ಮನೆಗಳನ್ನು ಈ ಗ್ಯಾಂಗ್ ಟಾರ್ಗೆಟ್ ಮಾಡುತ್ತಿತ್ತು. ಇತ್ತೀಚಿಗೆ ನೇಪಾಳ ಮೂಲದವರಿಂದಲೇ ಅತಿ ಹೆಚ್ಚು ದರೋಡೆ ಪ್ರಕರಣಗಳು ಬೆಂಗಳೂರಿನಲ್ಲಿ ನಡೆದಿತ್ತು.ಬಂಧಿತರಿಂದ 50 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಇದೀಗ ಅರೆಸ್ಟ್ ಆಗಿರುವ ಎಲ್ಲಾ ಐದು ಆರೋಪಿಗಳನ್ನು ಪೊಲೀಸರು ಜೈಲಿಗೆ ಅಟ್ಟಿದ್ದಾರೆ.