ಬೆಂಗಳೂರು : ಬೆಂಗಳೂರಿನಲ್ಲಿ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿ ಕೊಂಡು ಅಗ್ನಿ ಅವಘಡ ಸಂಭವಿಸಿದೆ. ಈ ವೇಳೆ ಕಾರಿನಲ್ಲಿದ್ದ ನಾಲ್ವರು ವಿದ್ಯಾರ್ಥಿಗಳು ಅದೃಷ್ಟವಶಾತ್ ಪ್ರಾಣ ಅಪಾಯದಿಂದ ಪಾರಾಗಿರುವ ಘಟನೆ ಬೆಂಗಳೂರಿನ ಯಶವಂತಪುರದ ಮತ್ತಿಗೇರಿ ಸಿಗ್ನಲ್ ಬಳಿ ನಡೆದಿದೆ.
ಹೌದು ಬೆಂಗಳೂರಿನ ಯಶವಂತಪುರದ ಮತ್ತಿರಿಯ ಸಿಗ್ನಲ್ ಬಳಿ ಈ ಒಂದು ಘಟನೆ ನಡೆದಿದೆ. ಬೆಂಕಿ ಕಾಣಿಸುತ್ತಿದ್ದಂತೆ ಕಾರಿನಿಂದ ಇಳಿದು ನಾಲ್ವರು ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಕಾರಿನಲ್ಲಿ ಹೇಗೆ ಬೆಂಕಿ ಹೊತ್ತುಕೊಂಡಿತು ಎಂದು ತಿಳಿದು ಬಂದಿಲ್ಲ. ಘಟನೆ ಕುರಿತು ಯಶವಂತಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.