ಬೆಂಗಳೂರು : ಬೆಂಗಳೂರಿನಲ್ಲಿ ಅಪಾರ್ಟ್ಮೆಂಟ್ ಮೇಲಿಂದ ಬಾಲಕಿಯೊಬ್ಬಳು ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬೆಂಗಳೂರಿನಲ್ಲಿ ಕಟ್ಟಡದಿಂದ ಜಿಗಿದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕಟ್ಟಡದ 29ನೇ ಮಹಡಿಯಿಂದ ಹಾರಿ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಹುಳಿಮಾವು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.
ಬೇಗೂರು ಬಳಿ ಇರುವ ಅಪಾರ್ಟ್ಮೆಂಟಲ್ಲಿ ಈ ದುರ್ಘಟನೆ ನಡೆದಿದೆ ಎಂದು ಹೇಳಲಾಗುತ್ತಿದ್ದು, ಅಪಾರ್ಟ್ಮೆಂಟ್ ನಲ್ಲಿ ಬಾಲಕಿ ಅಪ್ಪ ಅಮ್ಮನ ಜೊತೆಯಲ್ಲಿ ಇದ್ದಳು. ಆದರೆ ಬಾಲಕಿ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.ಹುಳಿಮಾವು ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತಂತೆ ಕೇಸ್ ದಾಖಲಾಗಿದೆ