ಬೆಂಗಳೂರು : ದಸರಾ ಹಬ್ಬದ ಅಂಗವಾಗಿ ಮನೆಯ ಮಾಲೀಕ ಪೂಜೆ ಹಾಗೂ ಭಜನೆ ಕಾರ್ಯಕ್ರಮಕ್ಕೆ ತೆರಳಿದಾಗ ಇದೇ ಸಮಯ ನೋಡಿಕೊಂಡು, ಕಳ್ಳರು ತಮ್ಮ ಕೈ ಚಳಕ ತೋರಿಸಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳು ಹಾಗೂ ನಗದು ಹಣವನ್ನು ದೋಚಿ ಪರಾರಿ ಆಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ನಡೆದಿದೆ.
ಹೌದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಪಟ್ಟಣದಲ್ಲಿ ಉದ್ಯಮಿಯ ಮನೆಯಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು ಮಾಡಲಾಗಿದೆ. ಉದ್ಯಮಿ ಲಾಲಾರಂ ಎಂಬವರಿಗೆ ಸೇರಿದ ಮನೆಯಲ್ಲಿ ದುಷ್ಕರ್ಮಿಗಳು ಕಳ್ಳತನ ಮಾಡಿದ್ದಾರೆ. ಮನೆ ಬಾಗಿಲು ಮುರಿದು 15 ಲಕ್ಷ ಮೌಲ್ಯದ 355 ಗ್ರಾಂ ಚಿನ್ನಾಭರಣ, 5 ಕೆಜಿ ಬೆಳ್ಳಿ 70 ಸಾವಿರ ನಗದನ್ನು ದೋಚಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ನೆಲಮಂಗಲ ಟೌನ್ ಪೋಲಿಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ದಸರಾ ಹಬ್ಬದ ಅಂಗವಾಗಿ ಪೂಜೆ ಭಜನೆ ಕಾರ್ಯಕ್ರಮಕ್ಕೆ ಉದ್ಯಮಿ ಲಾಲಾರಾಂ ತೆರಳಿದ್ದಾಗ ದುಷ್ಕರ್ಮಿಗಳು ಈ ಕೃತ್ಯವನ್ನು ಎಸೆಗಿದ್ದಾರೆ ಎಂದು ಹೇಳಲಾಗುತ್ತಿದೆ. ಘಟನೆ ಕುರಿತಂತೆ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.