ಬೆಂಗಳೂರು : ಬೆಂಗಳೂರಿನಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದ್ದು, ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಬೆಂಗಳೂರಿನ ರಾಚೇನಹಳ್ಳಿಯಲ್ಲಿ ನಿನ್ನೆ ಚಾನ್ಸನ್ ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದ. ಸಂಪಿಗೆಯಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು. ಚಾನ್ಸನ್ ದಿಲ್ಶಾದ್ ಎಂಬ ವಿವಾಹಿತ ಮಹಿಳೆಯನ್ನು ಪ್ರೀತಿಸುತ್ತಿದ್ದ. ಆದರೆ ಪ್ರೀತಿಗೆ ಸಮಾಜ ಒಪ್ಪುವುದಿಲ್ಲ ಎಂದು ಜಾನ್ಸನ್ ಆತ್ಮಹತ್ಯೆ ಮಾಡಿಕೊಂಡಿದ್ದ.
ಜಾನ್ಸನ್ ಆತ್ಮಹತ್ಯೆಯಿಂದ ಮನನೊಂದ ದಿಶ್ಯಾದ್ ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಶ್ರೀರಾಂಪುರ ಠಾಣಾ ವ್ಯಾಪ್ತಿಯ ಅಮೃತಹಳ್ಳಿಯಲ್ಲಿ ದಿಲ್ಶಾದ್ ಆತ್ಮಹತ್ಯೆ ಮಾಡಿಕೊಂಡಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.








