ಬೆಂಗಳೂರು : ಬೆಂಗಳೂರಿನಲ್ಲಿ ಕೆಎಎಸ್ ಅಧಿಕಾರಿಯ ಪತ್ನಿಯ ನಿಗೂಢ ಸಾವಾಗಿದ್ದು, ಬೆಂಗಳೂರಿನ ಸಂಜಯ್ ನಗರದ ಮನೆಯಲ್ಲಿ KAS ಅಧಿಕಾರಿಯ ಪತ್ನಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂದು ತಿಳಿದುಬಂದಿಲ್ಲ. ಸ್ಥಳಕ್ಕೆ ಸಂಜಯನಗರ ಪೊಲೀಸರು ಭೇಟಿ ನೀಡಿ ಇದೀಗ ಪರಿಶೀಲನೆ ನಡೆಸುತ್ತಿದ್ದಾರೆ.
ಹೌದು KAS ಅಧಿಕಾರಿ ಪತ್ನಿ ಚೈತ್ರಾಗೌಡ ಎನ್ನುವ ಮಹಿಳೆಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ., ಸಂಜಯ್ ನಗರದ ನಿವಾಸದ ಮನೆಯಲ್ಲಿ ಚೈತ್ರಾಗೌಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಸಂಜಯ್ ನಗರದ ನಿವಾಸದ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಇದೀಗ ಶವ ಪತ್ತೆಯಾಗಿದೆ, ಘಟನಾ ಸ್ಥಳಕ್ಕೆ ಸಂಜಯ್ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಯಲ್ಲಿ ಮನೆಯಲ್ಲಿ ಯಾವುದೇ ರೀತಿಯಾದ ಡೆತ್ ನೋಟ್ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.