ಬೆಂಗಳೂರು : ರಾಜ್ಯದಲ್ಲಿ ಕಳೆದ ಎರಡು ಮೂರು ದಿನಗಳಿಂದ ಕೊಲೆಗಳು ನಡೆಯುತ್ತಿದ್ದು ಇದೀಗ ಬೆಂಗಳೂರಿನಲ್ಲಿ ವಕೀಲರೊಬ್ಬರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಅಟ್ಟಾಡಿಸಿ ಕೊಚ್ಚಿ ಕೊಂದಿರುವ ಘಟನೆ ಬೆಂಗಳೂರಿನ ನೈಸ್ ರಸ್ತೆಯಲ್ಲಿ ನಡೆದಿದೆ.
ಹತ್ಯೆಯಾದ ವಕೀಲರನ್ನು ಕೆಂಗೇರಿಯ ಎಸ್‌ಎಂವಿ ಲೇಔಟ್ ನಿವಾಸಿ ಜಗದೀಶ್ (46) ಎಂದು ತಿಳಿದುಬಂದಿದೆ.ಕೆಂಗೇರಿಯ ಸಿವಿ ರಾಮನ್ ಎಸ್ಟೇಟ್ ಪಕ್ಕದ ನೈಸ್ ರಸ್ತೆಯಲ್ಲಿ ಜಗದೀಶ್ ರವರ ಕಾರು ಚಲಿಸುತ್ತಿದ್ದಾಗ ದುಷ್ಕರ್ಮಿಗಳು ಹಿಂಬಾಲಿಸಿಕೊಂಡು ಹೋಗಿ ತಮ್ಮ ವಾಹನದಿಂದ ಕಾರಿಗೆ ಡಿಕ್ಕಿ ಹೊಡೆಸಿದ್ದಾರೆ. ಈ ವೇಳೆ ಜಗದೀಶ್ ಕಾರಿಗೆ ಏನು ಆಯಿತು ಎಂದು ಕೆಳಗಡೆ ಇಳಿದಿದ್ದಾರೆ.
ಇದೆ ವೇಳೆ ಮಾರಕಾಸ್ತ್ರಗಳಿಂದ ಜಗದೀಶ್ ಮೇಲೆ ದುಷ್ಕರ್ಮಿಗಳು ಅಟ್ಯಾಕ್ ಮಾಡಿದ್ದಾರೆ. ಅವರಿಂದ ತಪ್ಪಿಸಿಕೊಳ್ಳಲು ಜಗದೀಶ್ ಅವರು ಪರಾರಿಯಾಗಿದ್ದಾರೆ. ಆದರೂ ಬಿಡದೆ ಅವರನ್ನು ಬೆನ್ನಟ್ಟಿ ನಡು ರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ತಲೆಗೆ ಬಲವಾಗಿ ಹೊಡೆದು ಭೀಕರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಕೆಂಗೇರಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.