ಬೆಂಗಳೂರು : ಮದುವೆಗೆ ಒಪ್ಪದಂತಹ ಯುವತಿಗೆ ಪಾಗಲ್ ಪ್ರೇಮಿ ಒಬ್ಬ ಚಾಕು ಇರಿದು ಭೀಕರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಜೆ.ಜೆ ನಗರದಲ್ಲಿ ನಡೆದಿದೆ. ಕಳೆದ ಮೂರು ದಿನಗಳ ಹಿಂದೆ ನಡೆದ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ.
ಚಾಕುವಿನಿಂದ ಯುವತಿಗೆ ಇರಿದ ಯುವಕನನ್ನು ಅಜೇಯ್ ಎಂದು ಗುರುತಿಸಲಾಗಿದ್ದು, ಯುವಕ ಮತ್ತು ಯುವತಿ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಮದುವೆಗೂ ಎಲ್ಲಾ ಸಿದ್ಧತೆ ನಡೆದಿತ್ತು. ಆದರೆ, ಕೊನೆ ಘಳಿಗೆಯಲ್ಲಿ ಯುವತಿ ಮದುವೆಗೆ ನಿರಾಕರಿಸಿದ್ದಾಳೆ. ಇದರಿಂದ ಕೋಪಗೊಂಡ ಪ್ರಿಯಕರ, ಯುವತಿಗೆ ಚಾಕುವಿನಿಂದ ಇರಿದಿದ್ದಾನೆ.
ಗಾಯಗೊಂಡಂತಹ ಯುವತಿಯನ್ನು ತಕ್ಷಣ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಜಯನಗರ ಪೊಲೀಸರು ಆರೋಪಿ ಅಜಯ್ನನ್ನು ಅರೆಸ್ಟ್ ಮಾಡಿದ್ದು, ಜಯ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿದ್ದಾರೆ.