ಬೆಂಗಳೂರು : ಪ್ರೀತಿಸಿದ ಯುವತಿ ದೂರವಾಗಿದ್ದಾಳೆ ಎಂದು ಮನನೊಂದ ಯುವಕನೊಬ್ಬ ರೂಮ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ರೂಮ್ನಲ್ಲಿ ನೇಣು ಬಿಗಿದುಕೊಂಡು ಸತೀಶ್ ಕುಮಾರ್ (25) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಖಾಸಗಿ ಕಂಪನಿ ಒಂದರಲ್ಲಿ ಮೃತ ಸತೀಶ್ ಕುಮಾರ್ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಕಾಲೇಜಿನಿಂದಲೇ ಸತೀಶ್ ಕುಮಾರ್ ಹಾಗೂ ಯುವತಿ ಪರಸ್ಪರ ಪ್ರೀತಿಸುತ್ತಿದ್ದರು.
ಆದರೆ ಇತ್ತೀಚಿಗೆ ಸತೀಶ್ ಕುಮಾರ್ ಇಂದ ಯುವತಿ ದೂರವಾಗಿದ್ದಾಳೆ. ಇದರಿಂದ ಮನನೊಂದು ನೇಣು ಬಿಗಿದುಕೊಂಡು ಸತೀಶ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸತೀಶ್ ಮೃತ ದೇಹ ಅಂಬೇಡ್ಕರ್ ಆಸ್ಪತ್ರೆಯ ಶವಾಗಾರಕ್ಕೆ ಶಿಫ್ಟ್ ಮಾಡಲಾಗಿದೆ.ಬಾಣಸವಾಡಿ ಠಾಣೆಯಲ್ಲಿ ಅಸಹಜ ಸಾವು ಎಂದು ಪ್ರಕರಣ ದಾಖಲಾಗಿದೆ.