ಬೆಂಗಳೂರು : ಬೆಂಗಳೂರಿನಲ್ಲಿ ಭೀಕರವಾದ ಮರ್ಡರ್ ಆಗಿದ್ದು ಪತ್ನಿಗೆ ಅನೈತಿಕ ಸಂಬಂಧ ಇದೆ ಎಂದು ಅನುಮಾನ ಗೊಂಡ ಪತಿ ಪತ್ನಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ರಾಚಾಮಾನ ಹಳ್ಳಿ ಗ್ರಾಮದಲ್ಲಿ ನಡೆದಿದೆ.
ಹತ್ಯೆಯಾದ ಮಹಿಳೆಯನ್ನು ರಾಜಮಾನ ಹಳ್ಳಿ ಗ್ರಾಮದ ಅನಿತಾ ಮೃತ ಗೃಹಿಣಿಯಾಗಿದ್ದು, ಬಾಬು ಕೊಲೆ ಮಾಡಿರುವ ಆರೋಪಿಯಾಗಿದ್ದಾನೆ.ಬಾಬು ಮೈಸೂರಿನ ಚಿಕ್ಕ ಮಾರ್ಕೆಟ್ ಏರಿಯಾದವರಾದ ಅನಿತಾಳನ್ನು 7 ವರ್ಷಗಳ ಹಿಂದೆ ಮದುವೆಯಾಗಿದ್ದನು. ಅನಿತ ಬಾಬು ಗೆ ಒಂದು ಗಂಡು ಹಾಗೂ ಒಂದು ಹೆಣ್ಣು ಮಗುವಿದೆ.
ಈ ಹಿಂದೆ ಅನಿತಾ ಗಂಡನ ಜೊತೆ ಜಗಳ ಮಾಡಿಕೊಂಡು ಒಂದು ತಿಂಗಳು ಮನೆ ಬಿಟ್ಟು ಹೋಗಿದ್ದಳು.ಕಳೆದ ವಾರ ಬಾಬು ಕುಟುಂಬಸ್ಥರು ವಾಪಾಸ್ ಕರೆದುಕೊಂಡು ಬಂದಿದ್ದರು. ಇದೆ ವಿಚಾರ ವಾಗಿ ಪದೇ ಪದೇ ಜಗಳವಾಡುತ್ತಿದ್ದರು. ನಿನ್ನೆ ಜಗಳವಾದಾಗ ಹೆಂಡತಿ ಹೊಡೆದಿದ್ದನು. ರಾತ್ರಿ ಮಲಗಿ ಬೆಳಗ್ಗೆ ಏಳುವಷ್ಟರಲ್ಲಿ ಅನಿತಾ ಸಾವನ್ನಪ್ಪಿದ್ದಾಳೆ. ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.