ಬೆಂಗಳೂರು : ಕ್ಷುಲಕ ಕಾರಣಕ್ಕೆ ದಂಪತಿಗಳ ನಡುವೆ ಗಲಾಟೆ ನಡೆದಿದ್ದು, ಗಲಾಟೆಯು ವಿಕೋಪಕ್ಕೆ ತಿರುಗಿ ರಸ್ತೆಯಲ್ಲಿಯೇ ಪತ್ನಿಗೆ ಚಾಕುವಿನಿಂದ ಇರಿದು ಪತಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರಿನ ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮಧ್ಯಾಹ್ನ 3.30 ರ ಸುಮಾರಿಗೆ ಪತ್ನಿ ಇಂದುವನ್ನು ಪತಿ ಬರ್ಬರವಾಗಿ ಹತ್ಯೆಗೈಡಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇಬ್ಬರ ನಡುವೆ ಭಿನ್ನಾಭಿಪ್ರಾಯದಿಂದ ಪತಿಯಿಂದ ಇಂದು ದೂರವಾಗಿದ್ದಳು.ಪತ್ನಿ ಜೊತೆ ಜಗಳ ತೆಗೆದು ರಸ್ತೆಯಲ್ಲಿ ಪತಿ ಇರಿದು ಇಂದುವನ್ನು ಕೊಂದಿದ್ದಾನೆ. ಘಟನಾ ಸ್ಥಳಕ್ಕೆ ಕೋರಮಂಗಲ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು ಕೊಲೆ ಕುರಿತಂತೆ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share.
Exit mobile version