ಬೆಂಗಳೂರು : ಬೆಂಗಳೂರಿನಲ್ಲಿ ಸಿಸಿಬಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬೃಹತ್ ಡ್ರಗ್ ಜಾಲವೊಂದನ್ನು ಪತ್ತೆ ಮಾಡಿದ್ದಾರೆ. ಈ ವೇಳೆ ಬರೋಬ್ಬರಿ ಆರು ಕೋಟಿ ರೂ ಮೌಲ್ಯದ ಎಂಡಿಎಂಎ ಡ್ರಗ್ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಮಂಗಳೂರಿನಲ್ಲಿ ಕೆಲ ದಿನಗಳ ಹಿಂದೆ ಎಂಡಿಎಂಎ ಮಾರಾಟ ವೇಳೆ ಹೈದರ್ ಅಲಿ ಎಂಬಾತನನ್ನು ಬಂಧಿಸಲಾಗಿತ್ತು. ವಿಚಾರಣೆ ವೇಳೆ ಈತ ಮಾಹಿತಿ ಆಧಾರದಲ್ಲಿ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರ ತಂಡವು ಬೆಂಗಳೂರಿಗೆ ತೆರಳಿ ವಿತರಣೆಗೆ ಸಿದ್ಧವಾಗಿದ್ದ ಡ್ರಗ್ಸ್ ವಶಕ್ಕೆ ಪಡೆದಿದೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿದ್ದ ನೈಜಿರಿಯಾ ಪ್ರಜೆ ಪೀಟರ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಪೀಟರ್ ಬೆಂಗಳೂರಿನ ವಿವೇಕಾನಂದ ನಗರದ ಮನೆಯೊಂದರಲ್ಲಿ ಬಾಡಿಗೆ ಇದ್ದ ಈ ವೇಳೆ ದಾಳಿ ಮಾಡಿದ ಪೊಲೀಸರು ಮನೆಯಲ್ಲಿದ್ದ ಒಟ್ಟು 6 ಕೋಟಿ ಮೌಲ್ಯದ 6.310 ಕೆಜಿ ಎಂಡಿಎಂಎ, 3 ಮೊಬೈಲ್ ಫೋನುಗಳು, ಡಿಜಿಟಲ್ ತೂಕ ಮಾಪಕ, ಒಟ್ಟು 35 ಎಟಿಎಂ/ಡೆಬಿಟ್ ಕಾರ್ಡ್ ಗಳು, 17 ಇನ್ ಅಕ್ಟಿವ್ ಸಿಮ್ ಕಾರ್ಡ್ ಗಳು, 10 ವಿವಿಧ ಬ್ಯಾಂಕ್ ಗಳ ಬ್ಯಾಂಕ್ ಖಾತೆ ಪುಸ್ತಕಗಳನ್ನು ವಶಪಡಿಸಿಕೊಳ್ಳಲಾಗಿದೆ.