ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಹಳಿಯ ಮೇಲೆ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳುವವರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿತ್ತು.ಇದೀಗ ಕಾಡುಗೋಡಿ ಟ್ರೀ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ಸಿಬ್ಬಂದಿಗಳ ಮೇಲೆ ಕುಡಿದ ಮತ್ತಿನಲ್ಲಿ ಇಬ್ಬರು ಆರೋಪಿಗಳು ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಹೌದು ನಿನ್ನೆ ಕುಡಿದ ಮತ್ತಿನಲ್ಲಿ ಇಬ್ಬರೂ ಮೆಟ್ರೋ ನಿಲ್ದಾಣಕ್ಕೆ ಆಗಮಿಸಿದ್ದರು. ಈ ವೇಳೆ ಭದ್ರತಾ ಸಿಬ್ಬಂದಿಗಳು ತಪಾಸಣೆ ಮಾಡಿ ಅವರನ್ನು ತಡೆದಿದ್ದರು. ಇದರಿಂದ ಕುಪಿತಗೊಂಡ ಇಬ್ಬರು ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ.ಈ ವೇಳೆ ಮಹಿಳಾ ಸಿಬ್ಬಂದಿ ಹಾಗೂ ಟಿಕೆಟ್ ಆಪರೇಟರ್ ಜೊತೆ ಅಸಭ್ಯ ಪದ ಬಳಸಿ ನಿಂದಿಸಿದ್ದಾರೆ.
ಅದಾದ ಬಳಿಕ ಗಲಾಟೆ ತಾರಕಕ್ಕೆ ಏರಿದ್ದು ಈ ವೇಳೆ, ಸಿಬ್ಬಂದಿಗಳು ಇಬ್ಬರನ್ನು ಹಿಡಿದುಕೊಂಡಿದ್ದಾರೆ ಆದರೆ ಅದರಲ್ಲಿ ಓರ್ವ ತಪ್ಪಿಸಿಕೊಂಡು ಓಡಿಹೋಗಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ BMRCL ಅಧಿಕಾರಿಗಳು ದೂರು ದಾಖಲಿಸಿದ್ದಾರೆ.