ಬೆಂಗಳೂರು : ಬೆಂಗಳೂರಿನಲ್ಲಿ ಬ್ರಾಂಡೆಡ್ ಉತ್ಪನ್ನಗಳನ್ನು ನಕಲು ಮಾಡಿ ಮಾರಾಟ ಮಾಡಲಾಗುತ್ತಿತ್ತು. ಬೆಂಗಳೂರಿನ ಕಾಟನಪೇಟೆ ಗೋದಾಮಿನಲ್ಲಿ ನಕಲಿ FMCG ಉತ್ಪನ್ನಗಳನ್ನು ಮಾರಾಟ ಮಾಡಲಾಗುತ್ತಿತ್ತು. ಈ ಒಂದು ಖಚಿತ ಮಾಹಿತಿಯನ್ನು ಆಧರಿಸಿ ಸಿಸಿಬಿ ಅಧಿಕಾರಿಗಳು ಮಾಡಿದ್ದಾರೆ.
ಬೆಂಗಳೂರಿನ ಮಾದನಾಯಕನಹಳ್ಳಿ ವ್ಯಾಪ್ತಿಯ ಕಾಚೋಹಳ್ಳಿ ಕಾರ್ಖಾನೆಯ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ. ದಾಳಿಯ ವೇಳೆ ನಕಲಿ ಡಿಟರ್ಜೆಂಟ್, ಟೀ ಪುಡಿ, ಮಸ್ಕಿಟೋ ಕಾಯಿಲ್ ಪತ್ತೆಯಾಗಿದೆ. 1. 75 ಕೋಟಿ ಮೌಲ್ಯದ ನಕಲಿ ಉತ್ಪನ್ನಗಳನ್ನು ಜಪ್ತಿ ಮಾಡಿದ ಸಿಸಿಬಿ ನಕಲಿ ಉತ್ಪನ್ನ ಮಾರಾಟ ಮಾಡುತ್ತಿದ್ದ ದಳಪತ್ ಸಿಂಗ್ ನನ್ನ ಇದೀಗ ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.