ಬೆಂಗಳೂರು : ಬೆಂಗಳೂರಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ನನ್ನು ಕೊಲೆ ಮಾಡಲಾಗಿದ್ದು, ಬೆಂಗಳೂರಿನ ಕಾಡುಗೋಡಿಯ ವಿಜಯಲಕ್ಷ್ಮಿ ಕಾಲೋನಿಯಲ್ಲಿ ಈ ಕೊಲೆ ನಡೆದಿದೆ. ಪುನೀತ್ ಅಲಿಯಾಸ್ ನೇಪಾಳಿ ಎನ್ನುವ ರೌಡಿಶೀಟರ್ ಹತ್ಯೆಯಾಗಿದೆ. ಕಾಡುಗೋಡಿ ಠಾಣೆಯ ವ್ಯಾಪ್ತಿಯ ರೌಡಿಶೀಟರ್ ನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ.
ಬೆಂಗಳೂರಿನ ಕಾಡುಗೋಡಿಯ ವಿಜಯಲಕ್ಷ್ಮಿ ಕಾಲೋನಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್, ಪುನೀತ್ ಅಲಿಯಾಸ್ ನೇಪಾಳಿಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ನಿನ್ನೆ ರಾತ್ರಿ 9.45 ಗಂಟೆ ಸುಮಾರಿಗೆ ಶ್ರೀಕಾಂತ್ ಮತ್ತು ಆತನ ಸಹಚರರು ಮಾರಕಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಇನ್ನು ದಾಳಿಯಲ್ಲಿ ಪುನೀತ್ ಸ್ನೇಹಿತನಿಗೂ ಗಂಭೀರವಾದ ಗಾಯಗಳಾಗಿದ್ದು, ಆತನಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಎಸ್ ಪಿ ಶಿವಕುಮಾರ್ ಗುಣಾರೆ ಮಾಹಿತಿ ನೀಡಿದ್ದಾರೆ.