ಬೆಂಗಳೂರು : ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಯುವಕನೊಬ್ಬನಿಗೆ, ರೌಡಿಶೀಟರ್ ಎದೆಗೆ ಚಾಕು ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಬನಶಂಕರಿಯ ಕಾವೇರಿ ನಗರದ 8ನೇ ಕ್ರಾಸ್ ನಲ್ಲಿ ಈ ಒಂದು ಕೊಲೆ ನಡೆದಿದೆ.
ಬನಶಂಕರಿಯ ಕಾವೇರಿ ನಗರದ 8ನೇ ಕ್ರಾಸ್ ನಲ್ಲಿ ವಿಕ್ರಂ (21) ಈತನ ಮೇಲೆ ಹಳೆ ದ್ವೇಷದ ಹಿನ್ನೆಲೆಯಲ್ಲಿ ರೌಡಿಶೀಟರ್ ವಸಿಂ (28) ಈತನಿಂದ ಈ ಕೃತ್ಯ ನಡೆದಿದೆ. ಕೆಲವು ವರ್ಷಗಳ ಹಿಂದೆ ಆರೋಪಿ ವಸಿಂ ಮೇಲೆ ವಿಕ್ರಂ ಹಲ್ಲೆ ಮಾಡಿದ್ದ ಎಂದು ಹೇಳಲಾಗುತ್ತಿದೆ. ಇದೇ ದ್ವೇಷದಿಂದ ಸ್ನೇಹಿತನ ಜೊತೆಗೆ ನಿಂತಿದ್ದಾಗ ಎದೆಗೆ ಚಾಕು ಇರಿದು ಭೀಕರವಾಗಿ ಕೊಲೆ ಮಾಡಿದ್ದಾನೆ.
ಗಾಯಳು ವಿಕ್ರಂನನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವನಪ್ಪಿದ್ದಾನೆ.ಕೊಲೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಕುರಿತಂತೆ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.