ಬೆಂಗಳೂರು : ಬೆಂಗಳೂರಲ್ಲಿ ಅತ್ಯಂತ ಭೀಕರವಾದ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದಂತಹ ಟ್ಯಾಂಕರ್ ಬಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ತೆರಳುತ್ತಿದ್ದ ಅಕ್ಕ ತಮ್ಮನ ಮೇಲೆ ಹರಿದಿದೆ ಈ ವೇಳೆ ಸ್ಥಳದಲ್ಲೇ ಅಕ್ಕ-ತಮ್ಮ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ದೊಡ್ಡ ನಾಗಮಂಗಲದಲ್ಲಿ ನಡೆದಿದೆ.
ಹೌದು ಇಂದು ಬೆಳಿಗ್ಗೆ ಕಾಲೇಜಿಗೆ ಹೋಗುವಾಗ ಈ ಒಂದು ದುರ್ಘಟನೆ ನಡೆದಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿಯ ದೊಡ್ಡ ನಾಗಮಂಗಲದಲ್ಲಿ ಈ ಒಂದು ದುರಂತ ಸಂಭವಿಸಿದೆ. ಮೃತ ಪಟ್ಟವರನ್ನು ಮಧುಮಿತ (20) ಹಾಗೂ ಆಕೆಯ ತಮ್ಮ ರಂಜನ್ (19)ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ವೇಗವಾಗಿ ಬರುತ್ತಿದ್ದ ವಾಟರ್ ಟ್ಯಾಂಕರ್ ಮೊದಲು ಬೈಕ್ ಮಿರರಿಗೆ ಟಚ್ ಆಗಿದೆ.
ಈ ವೇಳೆ ಟ್ಯಾಂಕರ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಅಕ್ಕ ತಮ್ಮ ಇಬ್ಬರೂ ಕೆಳಗೆ ಬಿದ್ದಿದ್ದಾರೆ. ಆಗ ಇಬ್ಬರ ಮೇಲೆ ಟ್ಯಾಂಕರ್ ಹರಿದು ಸ್ಥಳದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಘಟನ ಸ್ಥಳಕ್ಕೆ ಎಲೆಕ್ಟ್ರಾನಿಕ್ ಸಿಟಿ ಠಾಣೆಯ ಪೊಲೀಸರು ಭೇಟಿ ನೀಡಿದ್ದು ಘಟನೆ ಕುರಿತಂತೆ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.