BREAKING : ಬೆಂಗಳೂರಲ್ಲಿ ಪ್ರಾಂಶುಪಾಲರು ಬೈದಿದ್ದಕ್ಕೆ ಶಾಲಾ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ!

ಬೆಂಗಳೂರು : ಪ್ರಾಂಶುಪಾಲರು ಬೈದರು ಎಂಬ ಒಂದೇ ಒಂದು ಸಣ್ಣ ವಿಚಾರಕ್ಕೆ ವಿದ್ಯಾರ್ಥಿಯು ಮನನೊಂದು ಶಾಲಾ ಕಟ್ಟಡದಿಂದ ಜಿಗಿದಿರುವ ಘಟನೆ ಬೆಂಗಳೂರಿನ ಬಾಪೂಜಿ ನಗರದ A 1ಫಹಾದ್ ಶಾಲೆಯಲ್ಲಿ ಘಟನೆ ನಡೆದಿದೆ. ಬಾಪುಜಿನಗರದ ಶಾಲೆಯಲ್ಲಿ ನಡೆದ ಘಟನೆಯಾಗಿದ್ದು, ಶಾಲಾ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿದ್ದಾಳೆ. ಗಾಯಾಳು ವಿದ್ಯಾರ್ಥಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.ಸ್ಥಳಕ್ಕೆ ಬ್ಯಾಟರಾಯನಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ