ಬೆಂಗಳೂರು : ಪತ್ನಿಯ ಕಿರುಕುಳಕ್ಕೆ ಬೇಸತ್ತು ಇತ್ತೀಚಿಗೆ ಬೆಂಗಳೂರಿನಲ್ಲಿ ಟೆಕ್ಕಿ ಅತುಲ್ ಸುಭಾಷ್ ಅವರು ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ, ಅದು ಸುಭಾಷ್ ಪತ್ನಿಗೆ ಬಂಧನದ ಭೇಟಿ ಯದುರಾದ ಹಿನ್ನೆಲೆಯಲ್ಲಿ ಅವರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಹೌದು ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಮಾಡಿಕೊಂಡ ಬಳಿಕ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಅತುಲ್ ಪತ್ನಿ, ಹಾಗೂ ಕುಟುಂಬಸ್ಥರಿಗೆ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಇದರ ಬೆನ್ನಲ್ಲೇ ತಲೆಮರಿಸಿಕೊಂಡ ಅತುಲ್ ಪತ್ನಿಯಿಂದ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಲಾಗಿದೆ ಎಂದು ತಿಳಿದು ಬಂದಿದೆ.
ಅಲಹಾಬಾದ್ ಹೈಕೋರ್ಟಿಗೆ ಅತುಲ್ ಪತ್ನಿ ನಿರೀಕ್ಷಣಾ ಜಾಮೀನು ಸಲ್ಲಿಸಿದ್ದರೆ. ಪತ್ನಿ ನಿಕಿತಾ ಸೇರಿದಂತೆ ಇತರೆ ಆರೋಪಿಗಳು ಕೂಡ ನಿರೀಕ್ಷಣಾ ಜಾಮಿನಿಗೆ ಅರ್ಜಿ ಸಲ್ಲಿಸಿದ್ದಾರೆ. ಉತ್ತರ ಪ್ರದೇಶ ಬಿಟ್ಟು ಬೇರೆ ಕಡೆಗೆ ಆರೋಪಿಗಳು ತಲೆಮರೆಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ವಾಸ ಸ್ಥಳ ಬದಲಾವಣೆ ಮಾಡಿಕೊಂಡು ಆರೋಪಿಗಳು ಓಡಾಡುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ತಿಳಿದುಬಂದಿದೆ.