ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರವಾದ ಕೊಲೆಯಾಗಿದ್ದು, ಮಾರಕಾಸ್ತ್ರಗಳಿಂದ ಕೊಚ್ಚಿ ಮಂಗಳಮುಖಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕೆಆರ್ ಪುರಂ ನ ಬಸವೇಶ್ವರನಗರದ ಗಾಯತ್ರಿ ಲೇಔಟ್ ನಲ್ಲಿ ಈ ಒಂದು ಕೊಲೆ ನಡೆದಿದೆ.
ಕೊಲೆಯಾದ ಕರವೇ ಕಾರ್ಯಕರ್ತೆ ಮಂಗಳಮುಖಿ ತನುಶ್ರೀ (40) ಭೀಕರವಾಗಿ ಕೊಲೆಯಾಗಿದ್ದಾರೆ. ಮೂರು ತಿಂಗಳ ಹಿಂದೆ ಜಗನ್ನಾಥ್ ಎನ್ನುವವರ ಜೊತೆ ಮಂಗಳಮುಖಿ ತನುಶ್ರೀ ವಿವಾಹವಾಗಿದ್ದು, ಕಳೆದ ಮೂರು ದಿನಗಳ ಹಿಂದೆಯೇ ತನುಶ್ರೀ ಭೀಕರವಾಗಿ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ.
ತನುಶ್ರೀ ಕೊಲೆಯಾದ ಬಳಿಕ ಪತಿ ಜಗನ್ನಾಥ್ ಮತ್ತು ಮನೆ ಕೆಲಸದಾಕೆ ಎಸ್ಕೇಪ್ ಆಗಿದ್ದಾರೆ ಎನ್ನಲಾಗಿದ್ದು, ಕೊಲೆಯಾದ ತನುಶ್ರೀ ಸಂಗಮ ಎನ್‌ಜಿಒ ಸಹ ನಡೆಸುತ್ತಿದ್ದರು. ಸದ್ಯ ಘಟನಾ ಸ್ಥಳಕ್ಕೆ ಕೆಆರ್ ಪುರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ