ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನಲ್ಲಿ ಬಿಎಂಟಿಸಿ ಚಾಲಕ ಮತ್ತು ಕಂಡಕ್ಟರ್ ಗಳ ಮೇಲೆ ಹಲ್ಲೆ ನಡೆಸುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಇದೀಗ ಬೆಂಗಳೂರಿನಲ್ಲಿ ಕುಡಿದ ನಶೆಯಲ್ಲಿದ್ದ ಇಬ್ಬರು ವ್ಯಕ್ತಿಗಳು ಬಿಎಂಟಿಸಿ ಕಂಡಕ್ಟರ್ ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಉತ್ತರ ತಾಲೂಕಿನ ಶಾಂತಿನಗರ ಬಳಿ ನಡೆದಿದೆ.
ಹೌದು ಪಾನಮತ್ತ ಇಬ್ಬರು ವ್ಯಕ್ತಿಗಳಿಂದ ಬಿಎಂಟಿಸಿ ಬಸ್ ನಲ್ಲಿ ಗಲಾಟೆ ನಡೆದಿದ್ದು, ಪ್ರಶ್ನೆ ಮಾಡಿದ ಕಂಡಕ್ಟರ್ ರಾಜಣ್ಣ ಎನ್ನುವವರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಶಾಂತಿನಗರ ಬಳಿ ಈ ಒಂದು ಘಟನೆ ನಡೆದಿದೆ. ಗೋಪಾಲ ಹಾಗೂ ಹನುಮಂತಯ್ಯನನ್ನು ಪೊಲೀಸರು ಇದೀಗ ವಶಕ್ಕೆ ಪಡೆದುಕೊಂಡಿದ್ದಾರೆ.
ಮೆಜೆಸ್ಟಿಕ್ ನಿಂದ ಗಂಗೊಂಡನಹಳ್ಳಿಗೆ ಬರುತ್ತಿದ್ದ ಬಿಎಂಟಿಸಿ ಬಸ್ ನಲ್ಲಿ ಪಾನಮತ್ತರಾಗಿ ಇಬ್ಬರು ಬಿಎಂಟಿಸಿ ಬಸ್ನಲ್ಲಿ ಗಲಾಟೆ ಮಾಡಿದ್ದಾರೆ. ಈ ವೇಳೆ ಪ್ರಶ್ನೆ ಮಾಡಿದ ಕಂಡಕ್ಟರ್ ರಾಜಣ್ಣ ಮೇಲೆ ಗೋಪಾಲ್ ಮತ್ತು ಹನುಮಂತಯ್ಯ ಹಲ್ಲೆಗೆ ಯತ್ನಿಸಿದ್ದಾರೆ. ಬಳಿಕ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಘಟನೆ ಕುರಿತು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.