ಬೆಂಗಳೂರು : ಬೆಂಗಳೂರಿನಲ್ಲಿ ಬಸ್ ಗಾಗಿ ಕಾಯುತ್ತಿದ್ದ ಮಹಿಳೆ ಮೇಲೆ ಇಬ್ಬರು ಕಾಮುಕರು ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಹೇಳಿಕೆ ನೀಡಿದ್ದಾರೆ.
ಬಂಧಿತರನ್ನು ಗಣೇಶ್, ಶರವಣ ಎಂದು ಗುರುತಿಸಲಾಗಿದೆ. ಇಬ್ಬರು ಕೆ ಆರ್ ಮಾರ್ಕೆಟ್ ನಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದ್ದು, ಸದ್ಯ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಘಟನೆ ಹಿನ್ನೆಲೆ
ಕೆ.ಆರ್. ಮಾರ್ಕೆಟ್ ನಲ್ಲಿ ಬಸ್ ಗಾಗಿ ಕಾಯುತ್ತಿದ್ದ ಮಹಿಳೆ ಮೇಲೆ ಇಬ್ಬರು ಅಪರಿಚಿತ ವ್ಯಕ್ತಿಗಳು ಬಸ್ ತೋರಿಸುವುದಾಗಿ ಕರೆದೊಯ್ದು ಅತ್ಯಾಚಾರ ಎಸಗಿ ಮೊಬೈಲ್, ನಗದು ಹಾಗೂ ಚಿನ್ನಾಭರಣ ದೋಚಿದ್ದಾರೆ ಎಂದು ಕೇಂದ್ರ ವಿಭಾಗದ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ.
ಭಾನುವಾರ ರಾತ್ರಿ 11.39ಕ್ಕೆ ಕೆ.ಆರ್.ಮಾರ್ಕೆಟ್ ಬಳಿಯ ಗೋಡೌನ್ ಸ್ಟ್ರೀಟ್ ನಲ್ಲಿ ಈ ಘಟನೆ ನಡೆದಿದ್ದು, ಮಹಿಳೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಘಟನೆ ಸಂಬಂಧ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.