ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರವಾದಂತ ಕೊಲೆಯಾಗಿದ್ದು, ಮಹಿಳೆಯನ್ನು ಭೀಕರವಾಗಿ ಕೊಲೆ ಮಾಡಿ ಮೂಟೆ ಕಟ್ಟಿ ದುಷ್ಕರ್ಮಿಗಳು ಕಸದ ಲಾರಿಯಲ್ಲಿ ಇಟ್ಟು ಪರಾರಿಯಾಗಿರುವ ಘಟನೆ ಬೆಂಗಳೂರಿನ ಚೆನ್ನಮ್ಮನಕೆರೆ ಠಾಣೆ ವ್ಯಾಪ್ತಿಯ ಸ್ಕೇಟಿಂಗ್ ಗ್ರೌಂಡ್ ಬಳಿ ಈ ಒಂದು ಘಟನೆ ನಡೆದಿದೆ.
ನಿನ್ನೆ ತಡರಾತ್ರಿ ದುಷ್ಕರ್ಮಿಗಳು ಆಟೋದಲ್ಲಿ ಮಹಿಳೆಯ ಶವವನ್ನು ತಂದಿದ್ದಾರೆ. ಶವವನ್ನು ಮೈದಾನದ ಬಳಿ ನಿಲ್ಲಿಸಿದ್ದ ಕಸದ ಲಾರಿಯಲ್ಲಿ ಇಟ್ಟು ಪರಾರಿ ಆಗಿದ್ದಾರೆ. ಸುಮಾರು 30 ರಿಂದ 35 ವರ್ಷದ ಮಹಿಳೆಯ ಮೇಲೆ ದುಷ್ಕರ್ಮಿಗಳು ಅತ್ಯಾಚಾರ ಎಸಗಿ ಬಳಿಕ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ.ಏಕೆಂದರೆ ಮಹಿಳೆಯ ದೇಹದ ಮೇಲೆ ಅರ್ಬನ್ ಎಂಬ ಕಂಪನಿಯ ಟಿ-ಶರ್ಟ್ ಬಿಟ್ಟರೆ ಯಾವುದೇ ಒಳ ಉಡುಪುಗಳು ಇಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಇದೀಗ ಮಹಿಳೆಯ ಗುರುತು ಪತ್ತೆಗಾಗಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅಪರಿಚಿತ ಮಹಿಳೆಯ ಶವ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಹಂತಕರ ಪತ್ತೆಗಾಗಿ ಪೊಲೀಸರು ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಘಟನೆ ಕುರಿತಂತೆ ಚನ್ನಮ್ಮನ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.