ಬೆಂಗಳೂರು : ಬೆಂಗಳೂರಿನಲ್ಲಿ ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ನೇಣು ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇದೀಗ ಬೆಳಕಿಗೆ ಬಂದಿದೆ.
ಬೆಂಗಳೂರಿನ ರಾಮನಗರದಲ್ಲಿ ಮಹಿಳಾ ಶವ ಪತ್ತೆಯಾಗಿದ್ದು, ನೇಣು ಬಿಗಿದ ಸ್ಥಿತಿಯಲ್ಲಿ ಕಾನ್ಸ್ಟೇಬಲ್ ಶವ ಪತ್ತೆಯಾಗಿದೆ. ಮಂಜುಶ್ರೀ (27) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ದ್ಯಾವಸಂದ್ರದ ಮನೆಯಲ್ಲಿ ಮಂಜುಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಬೆಂಗಳೂರಿನಲ್ಲಿ ಪೊಲೀಸ್ ಕಾನ್ಸ್ಟೇಬಲ್ ಆಗಿ ಮಂಜುಶ್ರೀ ಕೆಲಸ ಮಾಡುತ್ತಿದ್ದರು. ಇತ್ತೀಚಿಗೆ ಅವರನ್ನು ಶಿವಾಜಿನಗರಕ್ಕೆ ವರ್ಗಾವಣೆ ಮಾಡಲಾಗಿತ್ತು. ಮೈಕೋಲೇಔಟ್ನಲ್ಲಿ ಮಂಜುಶ್ರೀ ಕೆಲಸ ಮಾಡುತ್ತಿದ್ದ ಎನ್ನಲಾಗುತ್ತಿದೆ. ಘಟನೆ ಕುರಿತಂತೆ ರಾಮನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.