ಬೆಂಗಳೂರು : ಬೆಂಗಳೂರಿನಲ್ಲಿ ಮನೆ ಕೆಲಸ ಮಾಡಿಕೊಂಡಿದ್ದ ಬಾಂಗ್ಲಾದೇಶದ ಮೂಲದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕಲ್ಕೆರೆ ಅಪಾರ್ಟ್ಮೆಂಟ್ ಬಳಿ ಈ ಒಂದು ಘಟನೆ ನಡೆದಿದೆ.
ಹೌದು ಬೆಂಗಳೂರಲ್ಲಿ ಮನೆ ಕೆಲಸ ಮಾಡುತ್ತಿದ್ದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಬಳಿಕ ಬರ್ಬರವಾಗಿ ಕೊಲೆ ಮಾಡಲಾಗಿದೆ. ರಾಮಮೂರ್ತಿ ನಗರ ಬಳಿಯ ಕಲ್ಕೆರೆ ಅಪಾರ್ಟ್ಮೆಂಟ್ ಬಳಿ ಇದೀಗ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯಾ ಎಸಗೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗುತ್ತಿದೆ.
ಮೂಲತಃ ಬಾಂಗ್ಲಾದೇಶದ ನಿವಾಸಿಯಾಗಿದ್ದ ನಜ್ಮಾ ಎನ್ನುವ ಮಹಿಳೆ, ಅಪಾರ್ಟ್ಮೆಂಟ್ನಲ್ಲಿ ನಜ್ಮಾ ಎನ್ನುವ ಮಹಿಳೆ ಕೆಲಸ ಮಾಡುತ್ತಿದ್ದಳು. ಈಕೆಗೆ ಮೂರು ಮಕ್ಕಳಿದ್ದು ಸದ್ಯ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು ಅಲ್ಲದೆ ಭೀಕರವಾಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗುತ್ತಿದೆ ಘಟನೆ ಸ್ಥಳಕ್ಕೆ ರಾಮಮೂರ್ತಿನಗರ ಠಾಣೆ ಪೊಲೀಸ್ರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.