ಕಲಬುರ್ಗಿ : ಶಾರ್ಟ್ ಸರ್ಕ್ಯೂಟ್ ನಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆ ಇಡೀ ಕಚೇರಿಯನ್ನು ಆವರಿಸಿದ ಪರಿಣಾಮ ಕಚೇರಿಯಲ್ಲಿದ್ದ ಕಂಪ್ಯೂಟರ್ ಕೆಲವು ಪೀಠೋಪಕರಣಗಳು ಸೇರಿದಂತೆ ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಕರಗಿರುವ ಘಟನೆ ಕಲ್ಬುರ್ಗಿ ಜಿಲ್ಲೆಯ ಅಫ್ಜಲ್ಪುರ ತಾಲೂಕಿನ ಬಿ ಇ ಓ ಕಚೇರಿಯಲ್ಲಿ ಈ ಒಂದು ದುರಂತ ಸಂಭವಿಸಿದೆ.
ಹೌದು ಕಲಬುರ್ಗಿ ಜಿಲ್ಲೆಯ ಅಫ್ಜಲಪುರ ಪಟ್ಟಣದಲ್ಲಿರುವ ಬಿ ಇ ಓ ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕಚೇರಿಯಲ್ಲಿನ ಕೆಲ ದಾಖಲಾತಿಗಳು, ಪೀಠೋಪಕರಣಗಳು ಹಾಗೂ ಕಂಪ್ಯೂಟರ್ ಸೇರಿ ಎಲೆಕ್ಟ್ರಿಕಲ್ ಉಪಕರಣಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿವೆ.
ಕಚೇರಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡಿರುವ ಶಂಕೆ ಇದೀಗ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ತಕ್ಷಣ ಅಗ್ನಿ ಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆ ಕುರಿತು ಅಫ್ಜಲ್ಪುರ ಪೊಲೀಸ್ ಸ್ಟೇಷನಲ್ಲಿ ಪ್ರಕರಣ ದಾಖಲಾಗಿದೆ.