ಕಲಬುರ್ಗಿ : ಆನ್ಲೈನ್ ಗೇಮ್ ಚಟ ಹತ್ತಿಸಿಕೊಂಡ ನರ್ಸಿಂಗ್ ವಿದ್ಯಾರ್ಥಿಯೊಬ್ಬ ಅದರಿಂದ ಹೊರಬರಲಾರದೆ, ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ, ನಗರದ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಪಕ್ಕದಲ್ಲಿರುವ ವೀರಶೈವ ವಸತಿ ನಿಲಯದ ಆವರಣದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಡೋಣಗಾಪುರದ ಸೋಮನಾಥ ಚಿದ್ರೆ(22) ಎಂದು ಹೇಳಲಾಗುತ್ತಿದೆ. ಈತ ಜಿಮ್ಸ್ ಆಸ್ಪತ್ರೆಯ ನರ್ಸಿಂಗ್ ಕೋರ್ಸ್ ನ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದು, ಆನ್ ಲೈನ್ ನಲ್ಲಿ ಗೇಮ್ ಗಳನ್ನು ಆಡುವುದರಲ್ಲೇ ಬ್ಯುಸಿಯಾಗಿದ್ದ ಎನ್ನಲಾಗಿದೆ.
ಆನ್‌ಲೈನ್ ವಿಡಿಯೋ ಚಟದಲ್ಲೇ ಮಗ ನಮ್ಮನ್ನು ಬಿಟ್ಟು ಅಗಲಿದ್ದಾನೆ. ಇದರಿಂದ ಹೊರಬಾರಲಾಗದೆ ಮಾನಸಿಕವಾಗಿ ಸ್ಥಿಮಿತ ಕಳೆದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಆತನ ತಂದೆ ಸತೀಶಕುಮಾರ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.ಈ ಕುರಿತು ಬ್ರಹ್ಮಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








