ಶಿವಮೊಗ್ಗ : ಕಳೆದ ಕೆಲವು ದಿನಗಳ ಹಿಂದೆ ನಾನು ಮುಂದಿನ ಜನ್ಮದಲ್ಲಿ ಸಾಬರಾಗಿ ಹುಟ್ಟುವೆ ಎಂಬ ಹೇಳಿಕೆ ನೀಡಿ ಸುದ್ದಿಯಾಗಿದ್ದ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಈಗ ಮತ್ತೆ ಸುದ್ದಿಯಲ್ಲಿದ್ದಾರೆ. ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುವುದಾಗಿ ತಿಳಿಸಿದ್ದು ಮುಂದಿನ ಚುನಾವಣೆಯಲ್ಲಿ ಪುತ್ರನಿಗೆ ಆಶೀರ್ವಾದ ಮಾಡುವಂತೆ ಮನವಿ ಮಾಡಿದ್ದಾರೆ.
ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಗ್ರಾಮದಲ್ಲಿ ನಡೆದ ಗ್ಯಾರಂಟಿ ಫಲಾನುಭವಿಗಳ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು, ಇದೇ ನನ್ನ ಕೊನೆಯ ಚುನಾವಣೆ. ಇಷ್ಟು ವರ್ಷ ನೀವು ನಿಮ್ಮ ಸಹೋದರ ಎಂದು ತಿಳಿದು ನನಗೆ ಆಶೀರ್ವಾದ ಮಾಡಿದಂತೆ, ಮುಂದಿನ ಚುನಾವಣೆಯಲ್ಲಿ ನನ್ನ ಮಗ ಗಣೇಶ್ ಅವರಿಗೆ ನಿಮ್ಮ ಬೆಂಬಲ ಮತ್ತು ಆಶೀರ್ವಾದ ಇರಲಿ ಎಂದರು.








