*ರಾಮಾಂಜನೇಯ ಅವಿನಾಶ್
ಬೆಂಗಳೂರು: ಮೈಸೂರಿನಲ್ಲಿ ದಾಖಲಾದ ಅಪಹರಣ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಹೊಳೆನರಸೀಪುರ ಶಾಸಕ ಎಚ್‌ಡಿ ರೇವಣ್ಣ ಅವರ ಪತ್ನಿ ಭವಾನಿ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ಹೈಕೋರ್ಟ್ ನೀಡಿದೆ. ಹೈಕೋರ್ಟ್ ಏಕ ಸದ್ಯಸ ಪೀಠ ಈ ಆದೇಶವನ್ನು ನೀಡಿದೆ.
ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣದ ಬಂಧನ ಭೀತಿಯಲ್ಲಿರುವ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಸಂತ್ರಸ್ತ ಮಹಿಳೆಯನ್ನು ಅಪಹರಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ವಿವಿಧ ಸೆಕ್ಷನ್ಗಳ ಅಡಿ ಎಫ್‌ಐಆರ್ ದಾಖಲಿಸಲಾಗಿದೆ. ಇದರಲ್ಲಿ ಭವಾನಿ ಪತಿ, ಜೆಡಿಎಸ್ ಶಾಸಕ ಹೆಚ್.ಡಿ. ರೇವಣ್ಣ ಮೊದಲ ಆರೋಪಿ ಹಾಗೂ ಸತೀಶ ಬಾಬಣ್ಣ ಎರಡನೇ ಆರೋಪಿಯಾಗಿದ್ದಾರೆ. ಪ್ರಕರಣ ಸಂಬಂಧ ಭವಾನಿ ರೇವಣ್ಣಜನಪ್ರತಿನಿಧಿಗಳ ನ್ಯಾಯಾದಲ್ಲಿ ಅರ್ಜಿ ಸಲ್ಲಿಸಿದ್ದರು, ಆದರೆ ಅಲ್ಲಿ ರೀಕ್ಷಣಾ ಜಾಮೀನು ನಿರಾಕರಿಸಿದ್ದ ಸಲುವಾಗಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.