ಬೆಂಗಳೂರು : ಮಹಿಳೆ ಅಪಹರಣ ಪ್ರಕಣದಲ್ಲಿ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿರುವ ಭವಾನಿ ರೇವಣ್ಣಗೆ ಬಂಧನ ಭೀತಿ ಎದುರಾಗಿದ್ದು, ನಿರೀಕ್ಷಣಾ ಜಾಮೀನಿಗಾಗಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.
ಕಿಡ್ನ್ಯಾಪ್ ಪ್ರಕರಣದಲ್ಲಿ ಜಾಮೀನು ಸಿಗದೆ ಜೆಡಿಎಸ್ ಶಾಸಕ ಹೆಚ್ಡಿ ರೇವಣ್ಣ ಪತ್ನಿ ಭವಾನಿ ರೇವಣ್ಣ ತಲೆಮರೆಸಿಕೊಂಡಿದ್ದಾರೆ. ಎಸ್ಐಟಿ ಅಧಿಕಾರಿಗಳು ವಿಚಾರಣೆಗೆಂದು ಹೊಳೆನರಸೀಪುರದಲ್ಲಿರುವ ನಿವಾಸಕ್ಕೆ ತೆರಳಿದ ವೇಳೆ ಭವಾನಿ ರೇವಣ್ಣ ಅಲ್ಲಿರಲಿಲ್ಲ. 15 ದಿನಗಳ ಹಿಂದೆಯೇ ಅವರು ನಿಗೂಢ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗಿದೆ.
ಈ ನಡುವೆ ಜಾಮೀನು ಅರ್ಜಿಗಾಗಿ ಭವಾನಿ ರೇವಣ್ಣ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಿದ್ದಾರೆ ಎನ್ನಲಾಗಿದೆ. ಬಂಧನದ ಭೀತಿಯಲ್ಲಿರುವ ಅವರು ಇಂದು ಜಾಮೀನು ಅರ್ಜಿ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಿದ್ದು, ಬಳಿಕ ಎಸ್ ಐಟಿ ಮುಂದೆ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಎನ್ನಲಾಗಿದೆ.