ಬೆಂಗಳೂರು : ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದ ಭೀತಿ ಇರುವ ಹಿನ್ನೆಲೆಯಲ್ಲಿ ಇದೀಗ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಅವರು ಹೈಕೋರ್ಟ್ ಮೊರೆ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ.
ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಪರ ವಕೀಲರು ಜನಪ್ರತಿನಿಧಿ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಆದರೆ ಶುಕ್ರವಾರ ಅರ್ಜಿ ವಜಾಗೊಂಡಿದೆ. ಈ ಹಿನ್ನೆಲೆಯಲ್ಲಿ ಬಂಧನ ಭೀತಿಯಿಂದ ಪ್ರಜ್ವಲ್ ತಾಯಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ಸೋಮವಾರ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆ ಇದೆ.
ಈಗಾಗಲೇ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಭವಾನಿ ರೇವಣ್ಣ ಅವರಿಗೆ ವಿಚಾರಣೆಗೆ ಹಾಜರಾಗಿ ಎಂದು ನೋಟಿಸ್ ನೀಡಿದೆ. ಆದರೆ ಭವಾನಿ ರೇವಣ್ಣ ಅವರು ಕಳೆದ 15 ದಿನಗಳಿಂದ ತಲೆಮರಿಸಿಕೊಂಡಿದ್ದು, ಇದೀಗ ಎಸ್ಐಟಿ ಅಧಿಕಾರಿಗಳು ಭವಾನಿ ರೇವಣ್ಣ ಅವರ ಮನೆಯ ಹತ್ತಿರ ಅವರಿಗಾಗಿ ಕಾದು ಕುಳಿತಿದ್ದಾರೆ. ಸಂಜೆ 5:00 ವರೆಗೂ ಅಧಿಕಾರಿಗಳು ಕಾಯಲಿದ್ದಾರೆ ಎಂದು ತಿಳಿದುಬಂದಿದೆ.