ಬೀದರ್ : ಕಳೆದ ಎರಡು ದಿನಗಳ ಹಿಂದೆ ಬೀದರ್ ನಲ್ಲಿ ಎಟಿಎಂ ಗೆ ಹಣ ತುಂಬವ ವೇಳೆ ಇಬ್ಬರು ದುಷ್ಕರ್ಮಿಗಳು ಎಟಿಎಂ ಹಣ ತುಂಬುವ ಸಿಬ್ಬಂದಿಗಳ ಮೇಲೆ ಬಂದೂಕಿನಿಂದ ದಾಳಿ ಮಾಡಿ ಓರ್ವ ಸಿಬ್ಬಂದಿಯನ್ನು ಕೊಂದು, ಸುಮಾರು 83 ಲಕ್ಷ ಹಣವಿದ್ದ ಬಾಕ್ಸ್ ಸಮೇತ ಕದ್ದು ಪರಾರಿಯಾಗಿದ್ದಾರೆ. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಈ ಒಂದು ದರೋಡೆಕೋರರ ಗ್ಯಾಂಗ್ ಅನ್ನು ಪತ್ತೆ ಹಚ್ಚಿದ್ದಾರೆ ಎಂದು ತಿಳಿದುಬಂದಿದೆ.
ಹೌದು ಎಟಿಎಂಗೆ ಹಣ ತುಂಬುವಾಗ ಗುಂಡಿನ ದಾಳಿ ಮಾಡಿ ಹಣ ದರೋಡೆ ಮಾಡಿದ ಇಬ್ಬರು ಆರೋಪಿಗಳ ಪೈಕಿ ಒಬ್ಬನ ಗುರುತು ಪತ್ತೆ ಮಾಡಲಾಗಿದೆ. ಆರೋಪಿಯು ಛತ್ತಿಸ್‌ಗಢ ಮೂಲದ ಮನೀಶ್ ಎಂಬಾತನಿಂದ ಈ ಕೃತ್ಯ ನಡೆದಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ. ಅಲ್ಲದೆ ದರೋಡೆ ಹಿಂದೆ ಬಿಹಾರ್ ಗ್ಯಾಂಗ್ ಇದೆ ಎನ್ನಲಾಗುತ್ತಿದೆ.
ಮೃತರಿಗೆ 8 ಲಕ್ಷ ಪರಿಹಾರ ಘೋಷಣೆ
ಜನವರಿ 16 ಗುರುವಾರ ಬೀದರ್‌ನ ಎಸ್‌ಬಿಐ ಬ್ಯಾಂಕ್ ಬಳಿ ಇದ್ದ ಎಟಿಎಂಗೆ ಹಣ ತುಂಬಲು ಬಂದ ಸಿಬ್ಬಂದಿ ಮೇಲೆ ಗುಂಡು ಹಾರಿಸಿ ಹಣದ ಬಾಕ್ಸ್‌ನೊಂದಿಗೆ ಇಬ್ಬರು ಕಳ್ಳರು ಎಸ್ಕೇಪ್ ಆಗಿದ್ದರು. ಗುಂಡಿನ ದಾಳಿಯಲ್ಲಿ ಓರ್ವ ಬ್ಯಾಂಕ್ ಸಿಬ್ಬಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಇನ್ನೂ ಎಟಿಎಂ ಬಳಿ ಗಂಡೇಟಿಗೆ ಬಲಿಯಾದ ಸಿಬ್ಬಂದಿ ಬೆಮಳಖೇಡ ಗ್ರಾಮದ ಗಿರಿ ವೆಂಕಟೇಶ ಎಂಬುವವರ ಕುಟುಂಬಸ್ಥರಿಗೆ 8 ಲಕ್ಷ ಪರಿಹಾರ ನೀಡುವುದಾಗಿ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಘೋಷಣೆ ಮಾಡಿದ್ದಾರೆ. ಮೃತನ ಮನೆಗೆ ಭೇಟಿ ನೀಡಿ ಕುಟುಂಬಸ್ಥರನ್ನು ಮಾತನಾಡಿಸಿದ ಈಶ್ವರ್ ಖಂಡ್ರೆ ಮೃತನ ತಾಯಿಗೆ ಐದು ಸಾವಿರ ಮಾಸಾಶನ ಹಾಗೂ ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ.