ನವದೆಹಲಿ : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಪವಿತ್ರಗೌಡ ಸೇರಿದಂತೆ ಎಲ್ಲಾ ಆರೋಪಿಗಳಿಗೂ ಕರ್ನಾಟಕ ಹೈಕೋರ್ಟ್ ರೆಗ್ಯುಲರ್ ಬೇಲ್ ನೀಡಿದೆ. ಈ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಪೊಲೀಸರು ಸುಪ್ರೀಂ ಕೋರ್ಟಿಗೆ ಜಾಮೀನು ರದ್ದು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಹಾಗಾಗಿ ಇಂದು ನಟ ದರ್ಶನ್ ಅವರ ಜಾಮೀನು ಭವಿಷ್ಯ ಸುಪ್ರೀಂ ಕೋರ್ಟ್ ನಲ್ಲಿ ನಿರ್ಧಾರವಾಗಲಿದೆ.
ಹೌದು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ರಾಜ್ಯ ಹೈಕೋರ್ಟಿನಿಂದ ಜಾಮೀನು ಪಡೆದು ಬಿಡುಗಡೆಯಾಗಿರುವ ನಟ ದರ್ಶನ್ ಸೇರಿ7 ಮಂದಿ ಜಾಮೀನು ರದ್ದು ಕೋರಿ ರಾಜ್ಯ ಪೊಲೀಸರು ಸುಪ್ರೀಂ ಕೋರ್ಟಲ್ಲಿ ಸಲ್ಲಿಸಿರುವ ಅರ್ಜಿ ಇಂದು ವಿಚಾರಣೆಗೆ ಬರಲಿದೆ. ಕರ್ನಾಟಕ ಪೊಲೀಸರು ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ಇಂದು ನಿಗದಿಯಾಗಿದೆ. ಹಾಗಾಗಿ ನಟ ದರ್ಶನ್ ಗೆ ಇಂದು ಮಹತ್ವದ ದಿನ ಎನ್ನಲಾಗುತ್ತದೆ.
ನಟ ದರ್ಶನ್, ಪವಿತ್ರಾ ಗೌಡ, ನಾಗರಾಜ್, ಲಕ್ಷ್ಮಣ್, ಅನು ಕುಮಾರ್, ಜಗದೀಶ್, ಪ್ರದೋಷ್ ಜಾಮೀನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ನ್ಯಾಯ ಮೂರ್ತಿಗಳಾದ ಜೆ.ಬಿ.ಪರಿದಿವಾಲಾ ಹಾಗೂ ಆರ್.ಮಹದೇವನ್ ದ್ವಿಸದಸ್ಯ ಪೀಠದ ಮುಂದೆ ಬರಲಿದೆ. ಡೆಸೆಂಬರ್‌ನಲ್ಲಿ ಆರೋಪಿಗಳು ಜಾಮೀನು ಪಡೆದಿದ್ದು, ಇದನ್ನು ಪ್ರಶ್ನಿಸಿ ಜ.6ರಂದು ರಾಜ್ಯ ಪೊಲೀಸರು ಸುಪ್ರೀಂ ಕೋರ್ಟಿನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ.