ನವದೆಹಲಿ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಖಚಿತ ಪಿಂಚಣಿ, ಕುಟುಂಬ ಪಿಂಚಣಿ ಮತ್ತು ಕನಿಷ್ಠ ಪಿಂಚಣಿಯನ್ನ ಒದಗಿಸುವ ಗುರಿಯನ್ನು ಹೊಂದಿರುವ ಏಕೀಕೃತ ಪಿಂಚಣಿ ಯೋಜನೆಗೆ (UPS) ಅನುಮೋದನೆ ನೀಡಿದೆ.
#WATCH | Union Minister Ashwini Vaishnaw says, "Today the Union Cabinet has approved Unified Pension Scheme (UPS) for government employees providing for the assured pension…50% assured pension is the first pillar of the scheme…second pillar will be assured family… pic.twitter.com/HmYKThrCZV
— ANI (@ANI) August 24, 2024
25 ವರ್ಷ ಕೆಲಸ ಮಾಡುವ ನೌಕರರಿಗೆ ಪೂರ್ಣ ಪಿಂಚಣಿ ಸಿಗಲಿದೆ ಎಂದು ಸರ್ಕಾರ ಹೇಳಿದೆ. ಯುಪಿಎಸ್ ಯೋಜನೆಯಿಂದ 23 ಲಕ್ಷ ಕೇಂದ್ರ ನೌಕರರು ಪ್ರಯೋಜನ ಪಡೆಯಲಿದ್ದಾರೆ. ಈ ಯೋಜನೆಯು ಏಪ್ರಿಲ್ 1, 2025 ರಿಂದ ಜಾರಿಗೆ ಬರಲಿದೆ.
ಸಂಪುಟ ಸಭೆಗೆ ಸಂಬಂಧಿಸಿದಂತೆ ಮಾಹಿತಿ ನೀಡಿದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್, 10 ವರ್ಷ ಸೇವೆ ಸಲ್ಲಿಸಿದವರಿಗೆ 10 ಸಾವಿರ ಪಿಂಚಣಿ ಸಿಗಲಿದೆ. ನೌಕರರು ಸೇವೆಯಲ್ಲಿರುವಾಗಲೇ ಮೃತಪಟ್ಟರೆ ಅವರ ಪತ್ನಿಯರಿಗೆ ಶೇ.60ರಷ್ಟು ಪಿಂಚಣಿ ನೀಡಲಾಗುವುದು.
ನೌಕರನು ಕನಿಷ್ಠ 25 ವರ್ಷಗಳ ಕಾಲ ಕೆಲಸ ಮಾಡುತ್ತಿದ್ದರೆ, ನಿವೃತ್ತಿಗೆ ಹಿಂದಿನ 12 ತಿಂಗಳ ಹಿಂದಿನ ಸರಾಸರಿ ವೇತನದ ಕನಿಷ್ಠ 50 ಪ್ರತಿಶತವನ್ನ ಪಿಂಚಣಿಯಾಗಿ ಪಡೆಯುತ್ತಾನೆ ಎಂದು ಸರ್ಕಾರ ಹೇಳಿದೆ. ಒಬ್ಬ ಪಿಂಚಣಿದಾರನು ಮರಣ ಹೊಂದಿದರೆ, ಅವನ ಕುಟುಂಬವು ಮರಣದ ಸಮಯದಲ್ಲಿ ಪಡೆದ ಪಿಂಚಣಿಯ ಶೇಕಡಾ 60 ರಷ್ಟು ಪಡೆಯುತ್ತದೆ.
BREAKING : ‘UAE’ ಮಧ್ಯಸ್ಥಿಕೆ ಪ್ರಯತ್ನದ ಫಲ : ‘230 ಉಕ್ರೇನ್ ಯುದ್ಧ ಕೈದಿ’ಗಳ ಬಿಡುಗಡೆ ಮಾಡಿದ ‘ರಷ್ಯಾ’
ನಾಳೆ ಈ 2 ವಸ್ತುಗಳನ್ನು ತಲೆಗೆ ಸುತ್ತಿಕೊಂಡರೆ ನಿಮ್ಮ ದೇಹದ ಎಲ್ಲಾ ಋಣಾತ್ಮಕ ಶಕ್ತಿ ದೂರ