ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ನಟ ದರ್ಶನ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ನಟ ದರ್ಶನ್ ಹಾಗೂ ಪವಿತ್ರ ಗೌಡ ಸೇರಿದಂತೆ ಎಲ್ಲ 7 ಆರೋಪಿಗಳಿಗೆ ಹೈಕೋರ್ಟ್ ಇದೀಗ ಜಾಮೀನು ನೀಡಿದೆ.
ಹೌದು ರೇಣುಕಾ ಸ್ವಾಮಿ ಪ್ರಕರಣದ ಏಳು ಆರೋಪಿಗಳಿಗೆ ಹೈಕೋರ್ಟ್ ಇದೀಗ ಜಾಮೀನು ನೀಡಿದೆ. ನಟ ದರ್ಶನ್ ಪವಿತ್ರ ಗೌಡ ಸೇರಿದಂತೆ ಎಲ್ಲಾ ಆರೋಪಿಗಳಿಗೂ ಇದೀಗ ಹೈಕೋರ್ಟ್ ಜಾಮೀನು ನೀಡಿದೆ.ಕಳೆದ ಆರು ತಿಂಗಳಿನಿಂದ ನಡೆದ ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುವಾಸ ಅನುಭವಿಸಿದ್ದರು.
ಇತ್ತೀಚಿಗೆ ಬೆನ್ನು ನೋವಿನ ಸಮಸ್ಯೆ ತಿಳಿಸಿ, ಬಳ್ಳಾರಿ ಜಿಲ್ಲೆ ಬಿಡುಗಡೆಯಾಗಿದ್ದರು. ಇತ್ತೀಚಿಗೆ ನಡೆದ ಒಂದು ವಾದ ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶರಾದ ಎಸ್ ಎಸ್ ವಿಶ್ವಶಿತ್ ಶೆಟ್ಟಿ ಅವರು ನಟ ದರ್ಶನ್ ಸೇರಿದಂತೆ ಎಲ್ಲಾ ಏಳು ಆರೋಪಿಗಳಿಗೂ ಜಾಮೀನು ಮಂಜೂರು ಮಾಡಿ ಆದೇಶಿಸಿದ್ದಾರೆ.