ಬೆಂಗಳೂರು : ಡ್ರಗ್ಸ್ ಮಾಫಿಯಾದೊಂದಿಗೆ ನಂಟು ಹೊಂದಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ದ್ವಿದೇದಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ರಾಗಿಣಿ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ಏಕಸದಸ್ಯ ಪೀಠ ರದ್ದುಪಡಿಸಿದೆ.
ರಾಗಿಣಿ ವಿರುದ್ಧ ಪಾರ್ಟಿ ಆಯೋಜಿಸಿ ಡ್ರಗ್ಸ್ ಬಳಕೆಗೆ ಅವಕಾಶ ನೀಡಲಾಗಿತ್ತು ಎನ್ನುವ ಆರೋಪವಿತ್ತು, ಆದರೆ ಆರೋಪದ ಯಾವುದೇ ಸಾಕ್ಷ್ಯಾಧಾರಗಳನ್ನು ಹಾಜರುಪಡಿಸಿಲ್ಲ. ಕೇವಲ ಸಹ ಆರೋಪಿಗಳ ಹೇಳಿಕೆ ಆಧರಿಸಿ ಕೇಸ್ ದಾಖಲಿಸಲಾಗಿದೆ ಎಂದು ರಾಗಿಣಿ ಪರ ವಕೀಲ ಎ. ಮೊಹಮ್ಮದ್ ತಾಹಿರ್ ವಾದ ಮಂಡಿಸಿದ್ದರು.
ಪ್ರಕರಣದ ವಾದ ಆಲಿಸಿದ ಹೈಕೋರ್ಟ್ ಏಕಸದಸ್ಯ ಪೀಠದನ್ಯಾಯಮೂರ್ತಿ ಹೇಮಂತ್ ಚಂದನ ಗೌಡರ್ ಪ್ರಕರಣ ರದ್ದುಪಡಿಸಿ ಆದೇಶ ಹೊರಡಿಸಿದ್ದಾರೆ. ಎ. ನಾಲ್ಕು ಆರೋಪಿ ಪ್ರಶಾಂತ್ ರಂಕಾ ವಿರುದ್ಧದ ಪ್ರಕರಣವನ್ನು ಕೂಡ ರದ್ದು ಮಾಡಲಾಗಿದೆ.